ದೊಡ್ಡಬಳ್ಳಾಪುರ, ಜು.2– ನಗರದ ಹೊರವಲಯದ ಬಾಶೆಟ್ಟಹಳ್ಳಿಯ ಪೆಟ್ರೋಲ್ ಬಂಕ್ ಸಮೀಪದಲ್ಲಿ ಗೋಣಿ ಚೀಲದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್ ಬಳಿಯ ಪೊದೆಯಲ್ಲಿ ಅಪರಿಚಿತ ವ್ಯಕ್ತಿಯ ಶವವನ್ನು ಮೂಟೆ ಕಟ್ಟಿ ಎಸೆಯಲಾಗಿದೆ ಎಂದು ಸ್ಥಳಿಯರೊಬ್ಬರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಗ್ರಾಮಾಂತರ ಠಾಣೆ ಪೊಲೀಸರಿಗೆ ಅಪರಿಚಿತ ವ್ಯಕ್ತಿಯ ಮೃತದೇಹ ಕಂಡು ಬಂದಿದೆ.
ಸುಮಾರು ಹತ್ತು ಹನ್ನೆರಡು ದಿನಗಳ ಹಿಂದೆಯೇ ಕೃತ್ಯ ನಡೆದಿರುವ ಶಂಕೆ ಇದ್ದು, ಶವ ಗುರುತು ಸಿಗದಷ್ಟು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಶ್ವಾನದಳ, ವಿಧಿ ವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಜನವಸತಿಗಳಿರುವ ಪ್ರದೇಶದಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ಸ್ಥಳಕ್ಕೆ ಎಸ್ಪಿ ಸಿ.ಕೆ.ಬಾಬಾ, ಡಿವೈಎಸ್‌ಪಿ ರವಿ.ಪಿ, ಇನ್‌ಸ್ಪೆಕ್ಟರ್ ಸಾಧಿಕ್ ಪಾಷಾ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುರೆಸಿದ್ದಾರೆ.
- ಬೆಟ್ಟ ಹತ್ತಿ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಗುಡ್ ನ್ಯೂಸ್
- ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ
- ದೆಹಲಿ : ಕೆಲಸಕ್ಕಿದ್ದವನಿಂದಲೆ ತಾಯಿ-ಮಗನ ಹತ್ಯೆ
- ಪಾಕ್ ಸೆಲೆಬ್ರಿಟಿಗಳ ಇನ್ಸ್ಟಾಗ್ರಾಮ್ ಮತ್ತು ಟ್ವಿಟರ್ ಪ್ರೊಫೈಲ್ಗಳನ್ನು ಮತ್ತೊಮ್ಮೆ ನಿರ್ಬಂಧಿಸಿದ ಭಾರತ
- ಇಂಡೋನೇಷ್ಯಾದ ಬಾಲಿ ಬಳಿ ದೋಣಿ ಮುಳುಗಿ 43 ಜನ ನಾಪತ್ತೆ