Thursday, July 3, 2025
Homeರಾಜ್ಯಕೆಲಸದ ಅವಧಿ ಹೆಚ್ಚಿಸಲು ತೀರ್ಮಾನವಾಗಿಲ್ಲ : ಸಂತೋಷ್‌ ಲಾಡ್‌

ಕೆಲಸದ ಅವಧಿ ಹೆಚ್ಚಿಸಲು ತೀರ್ಮಾನವಾಗಿಲ್ಲ : ಸಂತೋಷ್‌ ಲಾಡ್‌

No decision to increase working hours: Santosh Lad

ಬೆಂಗಳೂರು,ಜು.2- ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಸದ್ಯಕ್ಕೆ ಯಾವುದೇ ತೀರ್ಮಾನಗಳಾಗಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿರುವ ಅವರು, ಇದು ಕೇಂದ್ರ ಸರ್ಕಾರದ ಕಾನೂನು. ರಾಜ್ಯಸರ್ಕಾರದಿಂದ ಯಾವುದೇ ಪ್ರಸ್ತಾವನೆ ಇಲ್ಲ. ಸದ್ಯಕ್ಕೆ ತೀರ್ಮಾನ ತೆಗೆದುಕೊಳ್ಳದೇ ಇದ್ದರೂ ಕಾರ್ಮಿಕ ಮುಖಂಡರೊಂದಿಗೆ ಸಮಾಲೋಚನೆ ನಡೆದಿದೆ ಎಂದು ಹೇಳಿದರು.

ವಾಲೀಕಿ ಹಗರಣದಲ್ಲಿ ಸಿಬಿಐ ತನಿಖೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ರಾಜ್ಯಸರ್ಕಾರ ತನಿಖೆ ಮಾಡಿದೆ. ರಾಜಕೀಯ ದುರುದ್ದೇಶಪೂರಿತವಾಗಿ ಸಿಬಿಐ ಮಧ್ಯಪ್ರವೇಶಿಸಿದೆ. ಈ ಮೊದಲು ಎಷ್ಟೋ ಪ್ರಕರಣಗಳಲ್ಲಿ ಸಿಬಿಐ ತನಿಖೆ ಮಾಡಿದರೂ ಕೂಡ ಫಲಿತಾಂಶ ಏನು ಎಂದು ಎಲ್ಲರಿಗೂ ಗೊತ್ತಿದೆ ಎಂದರು.

ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೊಂದಾಯಿತರ ಮಕ್ಕಳಿಗಾಗಿ 31 ವಸತಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಮಂಡಳಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಅನುಮೋದನೆ ನೀಡಿದರೆ ಪ್ರಕ್ರಿಯೆಗಳನ್ನು ಮುಂದುವರೆಸುವುದಾಗಿ ಸಂತೋಷ್‌ ಲಾಡ್‌ ತಿಳಿಸಿದರು.

ಸಿದ್ದರಾಮಯ್ಯ ಜನಪ್ರಿಯ ನಾಯಕರು. ಅವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ. ಈಗಾಗಲೇ ಟೀಕೆ ಮಾಡುವವರ ವಿರುದ್ಧ ಪಕ್ಷದ ಅಧ್ಯಕ್ಷರು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.

ಮುಖ್ಯಮಂತ್ರಿಯಾಗಲು ಅದೃಷ್ಟ ಬೇಕು. ಸಿದ್ದರಾಮಯ್ಯ ಅವರಿಗೆ ಆ ಭಾಗ್ಯ ಇದೆ. ಬಿ.ಆರ್‌.ಪಾಟೀಲ್‌ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.ಯಾವುದೇ ವಿಚಾರಗಳಾದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ಬಹಿರಂಗ ಹೇಳಿಕೆ ನೀಡಬಾರದು. ಇದರಿಂದ ಶಿಸ್ತು ಉಲ್ಲಂಘನೆಯಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಪಕ್ಷದ ವರಿಷ್ಠರ ಬಳಿ ಅನುದಾನಕ್ಕೆ ಸಂಬಂಧಪಟ್ಟಂತೆ ಶಾಸಕರು ಚರ್ಚೆ ಮಾಡುವುದು ತಪ್ಪಲ್ಲ ಎಂದು ಪ್ರಶ್ನೆಯೊಂದಕ್ಕೆ ಸಂತೋಷ್‌ ಲಾಡ್‌ ಉತ್ತರಿಸಿದರು.

RELATED ARTICLES

Latest News