Saturday, July 5, 2025
Homeಜಿಲ್ಲಾ ಸುದ್ದಿಗಳು | District Newsಮೈಸೂರು | Mysuruಬೆಟ್ಟ ಹತ್ತಿ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಗುಡ್ ನ್ಯೂಸ್

ಬೆಟ್ಟ ಹತ್ತಿ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಗುಡ್ ನ್ಯೂಸ್

Good news for devotees who climb the hill to Chamundi Hill

ಮೈಸೂರು, ಜು. 3-ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಮೂಲಕ ಹತ್ತಿ ಬರುವ ಭಕ್ತರ ಅನುಕೂಲಕ್ಕಾಗಿ ಧರ್ಮದರ್ಶನ ಸರತಿ ಸಾಲಿನಲ್ಲಿ ನಿಂತು ದರ್ಶನ ಮಾಡಬಹುದಾಗಿದೆ.

ಮೊದಲ ಆಷಾಡ ಶುಕ್ರವಾರ ಮೆಟ್ಟಿಲುಗಳ ಮೂಲಕ ನಿರೀಕ್ಷೆಗೂ ಮೀರಿ ಹೆಚ್ಚು ಜನರ ಬಂದ ಕಾರಣ ಜನಸಂದಣಿಯಿಂದಾಗಿ ದೇವರ ದರ್ಶನಕ್ಕೆ ಮೆಟ್ಟಿಲು ಹತ್ತಿ ಬಂದ ಭಕ್ತರಿಗೆ ತಡವಾಗಿರುತ್ತದೆ. ಆದರೆ ಧರ್ಮದರ್ಶನ ಅಥವಾ ಟಿಕೆಟ್ ಪಡೆದು ದರ್ಶನ ಪಡೆದವರು ತ್ವರಿತಗತಿಯಲ್ಲಿ ದೇವಿಯ ದರ್ಶನ ಪಡೆದು ವಾಪಸ್ಸಾಗಿರುತ್ತಾರೆ.

ಈ ಹಿನ್ನೆಲೆಯಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಆಗಬಹುದಾದ ಅನಾನೂಕೂಲವನ್ನು ತಪ್ಪಿಸಲು ಜಿಲ್ಲಾಡಳಿತ ಚಾಮುಂಡಿ ಬೆಟ್ಟದಲ್ಲಿ ಸಾಕಷ್ಟು ಸುಧಾರಿತ ಕ್ರಮಗಳನ್ನು ತೆಗೆದುಕೊಂಡಿದೆ.
ಮುಂದಿನ ಎರಡನೇ ಆಷಾಢ ಹಾಗೂ ಉಳಿದ ಆಷಾಡ ಮಾಸದ ಶುಕ್ರವಾರಗಳಲ್ಲಿ ಮೆಟ್ಟಿಲು ಹತ್ತಿ ಬಂದ ಭಕ್ತರು ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ದರ್ಶನ ಮಾಡಬಹುದಾಗಿದೆ.

ಭಕ್ತರಿಗೆ ನಾಡದೇವಿಯ ಸುಗಮ ದರ್ಶನಕ್ಕಾಗಿ ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು ಭಕ್ತಾಧಿಗಳು ಉಚಿತ ಬಸ್ ಸೇವೆ ಪಡೆದು ಕಡಿಮೆ ಸಮಯದಲ್ಲಿ ಸುಗಮವಾಗಿ ದೇವರ ದರ್ಶನ ಪಡೆದುಕೊಳ್ಳಬಹುದಾಗಿದೆ. ಆದುದರಿಂದ ಭಕ್ತಾಧಿಗಳು ಉಚಿತ ಬಸ್ ಸೇವೆಯ ಸದುಪಯೋಗವನ್ನು ಮಾಡಿಕೊಂಡು ದೇವರ ದರ್ಶನ ಮಾಡಬಹುದು ಎಂದು ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES

Latest News