Monday, July 7, 2025
Homeಇದೀಗ ಬಂದ ಸುದ್ದಿಹಣಕಾಸಿನ ವಿಚಾರಕ್ಕೆ ನಡೆದ ಜಗಳ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯ

ಹಣಕಾಸಿನ ವಿಚಾರಕ್ಕೆ ನಡೆದ ಜಗಳ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯ

ತುಮಕೂರು,ಜು.6- ಹಣಕಾಸಿನ ವಿಚಾರಕ್ಕೆ ನಡೆದ ಜಗಳ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಟ್ವಾಡಿ ಬಳಿ ನಡೆದಿದೆ.ಆಫೀಜ್ ಅಹಮ್ಮದ್ ಕೊಲೆಯಾದ ವ್ಯಕ್ತಿ.ಫೈರೋಜ್ ಎಂಬ ವ್ಯಕ್ತಿ ಆಫೀಜ್ ಅಹಮ್ಮದ್‌ಗೆ ಹಣ ನೀಡಿದ್ದು, ಹಣ ವಾಪಸ್ ನೀಡುವಂತೆ ಹಲವು ಬಾರಿ ಕೇಳಿದ್ದರು.

ಈ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ರೊಚ್ಚಿಗೆದ್ದ ಫೈರೋಜ್ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಇಬ್ಬರೂ ಸ್ನೇಹಿತರಾಗಿದ್ದು, ಆಫೀಜ್ ಅಹಮ್ಮದ್ ದ್ವಿಚಕ್ರ ವಾಹನ ಗ್ಯಾರೇಜ್ ನಡೆಸುತ್ತಿದ್ದ. ಹಣದ ವಿಚಾರವಾಗಿಜಗಳ ನಡೆದು ಕೊಲೆಯಾಗಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಎಎಸ್‌ಪಿ ಗೋಪಾಲ್, ಪುರುಷೋತ್ತಮ, ಡಿವೈಎಸ್ಪಿ ಚಂದ್ರಶೇಖರ್, ಎನ್‌ಇಪಿಎಸ್ ಠಾಣೆಯ ಪಿಎಸ್‌ಐ ಚೇತನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಹೊಸಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Latest News