ಬೆಂಗಳೂರು,ಜು.7-ಪತಿಯ ಕುಡಿತದ ಚಟದಿಂದ ಕುಟುಂಬ ನಿರ್ವಹಿಸಲಾಗದೇ ತಾಯಿಯೇ ತನ್ನ ಕರುಳ ಕುಡಿಯನ್ನೇ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ನೆಲಮಂಗಲದಲ್ಲಿ ನಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ನಾಗಕಲ್ಲು ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಪವನ್-ರಾಧೆ ದಂಪತಿ ನಾಗಕಲ್ಲು ಗ್ರಾಮದಲ್ಲಿ ನೆಲೆಸಿದ್ದು, ಪವನ್ ಬಡತನದಿಂದ ಮನೆ ನಿಭಾಯಿಸಲಾಗದೆ ಕುಡಿತಕ್ಕೆ ದಾಸನಾಗಿದ್ದ. ಪತಿಯ ವರ್ತನೆಯಿಂದ ಪತ್ನಿ ಬೇಸತ್ತಿದ್ದಳು.
ಒಂದು ಕಡೆ ಬಡತನ, ಮತ್ತೊಂದು ಕಡೆ ಪತಿಯ ಕುಡಿತದ ಚಟದಿಂದ ಕುಟುಂಬ ನಿರ್ವಹಣೆ ಸಾಧ್ಯವಾಗದೆ ಮಗುವಿನ ಆರೈಕೆ ಕಷ್ಟವಾಗಿ ಹೆತ್ತ ತಾಯಿಯೇ ತನ್ನ ಒಂದೂವರೆ ತಿಂಗಳ ಮಗುವನ್ನು ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ತಡರಾತ್ರಿ ಹತ್ಯೆ ಮಾಡಿದ್ದಾಳೆ. ಇಂದು ಬೆಳಗ್ಗೆ ಸುದ್ದಿ ತಿಳಿದು ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
- ಎಲ್ಪಿಜಿ ಟ್ಯಾಂಕ್ ಸ್ಫೋಟಗೊಂಡು 7 ಮಂದಿ ಸಜೀವ ದಹನ
- ಬೈಕ್ಗೆ ಕಾರು ಡಿಕ್ಕಿಯಾಗಿ ಸೇತುವೆಯಿಂದ ಬಿದ್ದು ಮಹಿಳೆ ಸಾವು
- ವಾಯು ರಕ್ಷಣಾ ಶಸ್ತ್ರಾಸ್ತ್ರ ಹಾರಾಟ ಪರೀಕ್ಷೆ ಯಶಸ್ವಿ
- ಮನೆಯಲ್ಲೇ ಎಸ್ಐಟಿಯಿಂದ ಸುಜಾತ ಭಟ್ ವಿಚಾರಣೆ
- ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ