Wednesday, July 9, 2025
Homeರಾಜ್ಯದಾವಣಗೆರೆ ಹಾಗೂ ಧಾರವಾಡದಲ್ಲಿ ಹೃದಯಾಘಾತದಿಂದ ಇಬ್ಬರು ವಿದ್ಯಾರ್ಥಿಗಳ ಸಾವು

ದಾವಣಗೆರೆ ಹಾಗೂ ಧಾರವಾಡದಲ್ಲಿ ಹೃದಯಾಘಾತದಿಂದ ಇಬ್ಬರು ವಿದ್ಯಾರ್ಥಿಗಳ ಸಾವು

Two students die of heart attacks in Davangere and Dharwad

ದಾವಣಗೆರೆ/ಧಾರವಾಡ, ಜು.9– ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ದಾವಣಗೆರೆಯಲ್ಲಿ ವಿದ್ಯಾರ್ಥಿಯೊಬ್ಬ ಹಾಗೂ ಧಾರವಾಡದಲ್ಲಿ ಯುವತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ದಾವಣಗೆರೆ ಜಯನಗರದ ನಿವಾಸಿ ಅಕ್ಷಯ್ (22) ಮೃತಪಟ್ಟ ವಿದ್ಯಾರ್ಥಿ. ಮನೆಯಲ್ಲಿ ಕುಳಿತಿದ್ದಾಗ ಎದೆನೋವಿನಿಂದ ಕುಸಿದು ಬಿದ್ದಿದ್ದಾನೆ. ಕೂಡಲೇ ಪೋಷಕರು ಆಸ್ಪತ್ರೆಗೆ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅಕ್ಷಯ್ ಮೃತಪಟ್ಟಿದ್ದಾನೆ.

ಆಕ್ರಂಧನ: ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರನಾದ ಅಕ್ಷಯ್ ಹೃದಯಾಘಾತದಿಂದ ದಿಢೀರನೆ ಮೃತಪಟ್ಟಿದ್ದು, ಪೋಷಕರಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬಾಳಿಬದುಕಬೇಕಾದ ಯುವ ಹರೆಯದಲ್ಲೇ ದುರಂತ ಅಂತ್ಯಕಂಡಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟಿಸಿದೆ.ದಾವಣಗೆರೆ ಜಿಲ್ಲಾಸ್ಪತ್ರೆವೊಂದರಲ್ಲಿ ಕಳೆದ ಮೂರು ತಿಂಗಳಲ್ಲಿ 75ಕ್ಕೂ ಹೆಚ್ಚು ಮಂದಿ ಹೃದಯಘಾತದಿಂದ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

ಧಾರವಾಡ: ತಲೆಸುತ್ತು ಬಂದು ಸುಸ್ತಾಗಿ ಕುಳಿತಿದ್ದ 26 ವರ್ಷದ ಜೀವಿತ ಕುಸಗೂರು ಎಂಬ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಧಾರವಾಡದ ರೋಹಿತ್ ನಗರದಲ್ಲಿ ವಾಸವಾಗಿದ್ದ ಯುವತಿಗೆ ತಲೆ ಸುತ್ತು ಬಂದಿದೆ. ಸುಸ್ತಾಗಿ ಚೇರಿನ ಮೇಲೆ ಕುಳಿತಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ದಿನೇ ದಿನೇ ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಹೆಚ್ಚುತ್ತಲೇ ಇದ್ದು, ಯುವಜನತೆ ಆತಂಕಕ್ಕೀಡಾಗಿದ್ದಾರೆ. ಆರೋಗ್ಯ ಸಮಸ್ಯೆ ಇರುವ ಜನರು ಮುಂಜಾಗ್ರತಾ ಕ್ರಮವಾಗಿ ತಪಾಸಣೆಗಾಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದು, ಎಲ್ಲಾ ಆಸ್ಪತ್ರೆಗಳಲ್ಲಿ ಜನಸಂದಣಿ ಹೆಚ್ಚಾಗಿದೆ.

RELATED ARTICLES

Latest News