ಮೈಸೂರು,ಜು.11- ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು ಮತ್ತು ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ರಾಮಾನುಜ ರಸ್ತೆಯ 12ನೇ ಕ್ರಾಸ್ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ರಾಜನ್ (38), ಪತ್ನಿ ಕುಮುದ, ವಿಶಾಲಕ್ಷಿ ಹಾಗೂ ರೇಣುಕಮ್ಮ ಎಂದು ತಿಳಿದುಬಂದಿದೆ.
ಅಗ್ರಹಾರ ರಸ್ತೆ ಜನಸಂದಣಿ ಇರುವ ರಾಮಾನುಜ ರಸ್ತೆಯಲ್ಲಿ ಆಟೋದಲ್ಲಿ ತನ್ನ ಪಾಡಿಗೆ ಮಹಿಳೆ ಮತ್ತು ವ್ಯಕ್ತಿ ಹೋಗುತ್ತಿದ್ದು, ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಏಕಾಏಕಿ ಆಟೋವನ್ನು ಅಡ್ಡಗಟ್ಟಿ ಅದರಲ್ಲಿದ್ದವರನ್ನು ಹೊರಗೆಳೆದು ಮಾರಕಾಸ್ತ್ರಗಳಿಂದ ಮನಬಂದಂತೆ ಥಳಿಸಿದ್ದಾರೆ.
ಮೂವರು ಮಹಿಳೆಯರು ಮತ್ತು ಯುವಕನ ಮೇಲೆ ಹಲ್ಲೆ ಮಾಡಿ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ.ಈ ಘಟನೆಯಲ್ಲಿ ಮಹಿಳೆಯರು ಮತ್ತು ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಈ ಸಿನಿಮೀಯ ಶೈಲಿಯ ದಾಳಿಯ ದೃಶ್ಯ ಸಿಸಿ ಕ್ಯಾಮರಾ ಹಾಗೂ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.ಹಲ್ಲೆಗೊಳಗಾದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆಗೆ ಕಾರಣ :
ಕಳೆದ ಒಂದು ವರ್ಷದ ಹಿಂದೆ ರಾಜನ್ ಮೇಲೆ ಫೋಟೊ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ಮಾತುಕತೆಗಾಗಿ ಹೋಗಿ ವಾಪಸ್ ಆಟೋದಲ್ಲಿ ಬರುವಾಗ ಹಿಂದಿನಿಂದ ಕಾರಿನಲ್ಲಿ ಫಾಲೋ ಮಾಡಿಕೊಂಡು ಬಂದ ರಾಮು, ಸೌಮ್ಯ, ಅಬ್ಬಯ್ಯ ಪ್ರಸಾದ್ ಎಂಬುವರು ಲಾಂಗ್ ಸೇರಿದಂತೆ ಮಾರಕಾಸ್ತ್ರಗಳಿಂದ ಆಟೋದಲ್ಲಿದ್ದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿಯ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಮುಂದುವರೆಯಲಿದೆ.
- ದಾವಣಗೆರೆ : ಸಾಲ ತೀರಿಸಲಾಗದೆ ರೈಲಿಗೆ ತಲೆಕೊಟ್ಟ ತಾಯಿ -ಮಗಳು
- ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನ ಹತ್ಯೆ
- ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟದಲ್ಲಿ ಬಡವಾದ ಕಾರ್ಯಕರ್ತರು
- ಸಂಚಾರ ನಿಯಮ ಉಲ್ಲಂಘಿಸಿದ 10 ಶಾಲಾ ವಾಹನಗಳ ಜಪ್ತಿ
- ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ : 15 ಮಂದಿ ಸೆರೆ, 39.26 ರೂ.ಕೋಟಿ ಮೌಲ್ಯದ ನಗದು, ಆಭರಣ ಜಪ್ತಿ