ಬಳ್ಳಾರಿ,ಜು.11- ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನೂ ಕೂಡ ಆಕಾಂಕ್ಷಿ ಎಂದು ಹೇಳುವ ಮೂಲಕ ಹಾಲಿ ಅಧ್ಯಕ್ಷ ಭೀಮಾನಾಯಕ್, ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಪೈಪೋಟಿ ನೀಡಲಾರಂಭಿಸಿದ್ದಾರೆ.
ಈಗಾಗಲೇ ಒಂದು ಅವಧಿಗೆ ಕೆಎಂಎಫ್ ಅಧ್ಯಕ್ಷರಾಗಿ ಅಧಿಕಾರ ಪೂರ್ಣಗೊಳಿಸಿರುವ ಭೀಮಾನಾಯಕ್ ಎರಡನೇ ಅವಧಿಗೂ ಮತ್ತೊಮೆ ಅಧ್ಯಕ್ಷ ಸ್ಥಾನ ಗಿಟ್ಟಿಸಲು ಪ್ರಯತ್ನ ನಡೆಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಹಗರಿಬೊಮನಹಳ್ಳಿ ಕ್ಷೇತ್ರದ ಮಾಜಿ ಶಾಸಕರಾಗಿರುವ ಭೀಮಾನಾಯಕ್ ತಮ ರಾಜಕೀಯ ಭವಿಷ್ಯ ಕಂಡುಕೊಂಡಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರರೂ ಆಗಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಕೆಎಂಎಫ್ ಅಧ್ಯಕ್ಷರಾಗಲು ಒಳಗೊಳಗೇ ತಯಾರಿ ನಡೆಸುತ್ತಿದ್ದಾರೆ.
ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಕಳೆದ ಬಾರಿಯಿಂದಲೂ ಶಾಸಕ ಕೆ.ವೈ.ನಂಜೇಗೌಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಬಂಗಾರಪೇಟೆ ಕ್ಷೇತ್ರದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೂಡ ಪೈಪೋಟಿ ನಡೆಸಿದ್ದರು. ಡಿ.ಕೆ.ಸುರೇಶ್ ಪ್ರವೇಶದಿಂದಾಗಿ ಕೆಎಂಎಫ್‌ನ ಪೈಪೋಟಿ ತೀವ್ರಗೊಂಡಿದ್ದು, ಕೆ.ವೈ.ನಂಜೇಗೌಡ, ಭೀಮಾನಾಯಕ್ ಹಾಗೂ ಡಿ.ಕೆ.ಸುರೇಶ್ ನಡುವೆ ಭಾರೀ ಸೆಣೆಸಾಟ ಆರಂಭಗೊಂಡಿದೆ.
ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತದೆಯೋ ಅವರಿಗೆ ಅವಕಾಶ ಸಿಗಲಿದೆ ಎಂದು ಹೇಳಲಾಗಿದ್ದರೂ ಡಿ.ಕೆ.ಶಿವಕುಮಾರ್ ತಮ ಸಹೋದರರನ್ನು ಕೆಎಂಎಫ್‌ನಲ್ಲಿ ಪ್ರತಿಷ್ಠಾಪಿಸಲು ಭಾರೀ ಪ್ರಯತ್ನ ಮಾಡುತ್ತಿದ್ದಾರೆ.ಹೈಕಮಾಂಡ್ ಮಟ್ಟದಲ್ಲಿ ಹಲವಾರು ಹೊಂದಾಣಿಕೆಗಳ ಮೂಲಕ ಡಿ.ಕೆ.ಸುರೇಶ್‌ಗಾಗಿ ಡಿ.ಕೆ.ಶಿವಕುಮಾರ್ ತ್ಯಾಗ ಮಾಡಿದಂತೆ ಕಂಡುಬರುತ್ತಿದೆ.
- ದಾವಣಗೆರೆ : ಸಾಲ ತೀರಿಸಲಾಗದೆ ರೈಲಿಗೆ ತಲೆಕೊಟ್ಟ ತಾಯಿ -ಮಗಳು
- ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನ ಹತ್ಯೆ
- ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟದಲ್ಲಿ ಬಡವಾದ ಕಾರ್ಯಕರ್ತರು
- ಸಂಚಾರ ನಿಯಮ ಉಲ್ಲಂಘಿಸಿದ 10 ಶಾಲಾ ವಾಹನಗಳ ಜಪ್ತಿ
- ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ : 15 ಮಂದಿ ಸೆರೆ, 39.26 ರೂ.ಕೋಟಿ ಮೌಲ್ಯದ ನಗದು, ಆಭರಣ ಜಪ್ತಿ