Saturday, July 12, 2025
Homeರಾಜ್ಯಮಾಜಿ ಸಭಾಪತಿ ಎನ್‌.ತಿಪ್ಪಣ್ಣ ನಿಧನ

ಮಾಜಿ ಸಭಾಪತಿ ಎನ್‌.ತಿಪ್ಪಣ್ಣ ನಿಧನ

Former Speaker N. Thippanna passes away

ಬೆಂಗಳೂರು,ಜು.11- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಧಾನಪರಿಷತ್‌ ಮಾಜಿ ಸಭಾಪತಿ, ಹಿರಿಯ ಮುತ್ಸದ್ಧಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌.ತಿಪ್ಪಣ್ಣ (98) ಅವರು ಇಂದು ಲಿಂಗೈಕ್ಯರಾಗಿದ್ದಾರೆ.

ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ತಿಪ್ಪಣ್ಣ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಬಳ್ಳಾರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಅವರ ಸ್ವಗ್ರಾಮ ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ತಿಪ್ಪಣ್ಣ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ನಡೆಯಲಿದೆ.

ಮೂರು ಬಾರಿ ವಿಧಾನಪರಿಷತ್‌ ಸದಸ್ಯರಾಗಿ, ಎರಡು ಬಾರಿ ವಿಧಾನಪರಿಷತ್‌ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದ ತಿಪ್ಪಣ್ಣ ಅನುಭವಿ ಹಿರಿಯ ನ್ಯಾಯವಾದಿ, ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದರು.

ಸಮಾಜ ಸೇವೆಯಲ್ಲಿ ತಮನ್ನು ತೊಡಗಿಸಿಕೊಂಡಿದ್ದ ತಿಪ್ಪಣ್ಣ ಅವರಿಗೆ ಅಪಾರ ಅಭಿಮಾನಿಗಳಿದ್ದರು. ಬಳ್ಳಾರಿ ಜಿಲ್ಲೆಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಮಾಜಸೇವೆ ಸಲ್ಲಿಸಿದ ಎನ್‌.ತಿಪ್ಪಣ್ಣ ಅವರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಾಗಿತ್ತು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಎನ್‌.ತಿಪ್ಪಣ್ಣ ಸೇವೆ ಸಲ್ಲಿಸಿದ್ದರು. ಇಳಿವಯಸ್ಸಿನಲ್ಲೂ ತಮ ಕೆಲಸಗಳಿಂದಲೇ ಜನಮನ ಗೆದಿದ್ದರು. ಜೆಡಿಎಸ್‌‍ ರಾಜ್ಯಾಧ್ಯಕ್ಷರಾಗಿ ಸೇವೆ: ಬಿಜೆಪಿ-ಜೆಡಿಎಸ್‌‍ ಸಮಿಶ್ರ ಸರ್ಕಾರ ರಚನೆಯಾದ ಸಂದರ್ಭದಲ್ಲಿ ತಿಪ್ಪಣ್ಣ ಅವರು ಜೆಡಿಎಸ್‌‍ ರಾಜ್ಯಾಧ್ಯಕ್ಷರಾಗಿದ್ದರು. ಹೆಚ್‌.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಲು ಪೂರಕವಾಗಿ ತಿಪ್ಪಣ್ಣ ಪಕ್ಷದ ಅಧ್ಯಕ್ಷರಾಗಿ ಸ್ಪಂದಿಸಿದ್ದರು.

ಇವರ ಸಹಕಾರದಿಂದ ಮೈತ್ರಿ ಸರ್ಕಾರ ತಾಂತ್ರಿಕ ತೊಡಕುಗಳಿಲ್ಲದೆ ರಚನೆಯಾಗಿತ್ತು ಎಂಬುದನ್ನು ಈ ಸಂದರ್ಭದಲ್ಲಿ ಸರಿಸಬಹುದಾಗಿದೆ. ಬಳ್ಳಾರಿ ವೀರಶೈವ ವಿದ್ಯಾವರ್ಧಕ ಸಂಘದ ಸುಧೀರ್ಘ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ಸೇವಾ ಅವಧಿಯಲ್ಲಿ ಸಂಘದ ವತಿಯಿಂದ ಹಲವು ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಿದ್ದರು.

ಸಂತಾಪ: ತಿಪ್ಪಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿ.ಎಂ ಬಿ.ಎಸ್‌‍ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಅರ್‌. ಆಶೋಕ್‌, ಸಂಸದರಾದ ಬಸವರಾಜ್‌ ಬೊಮಾಯಿ, ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ವಿವಿಧ ಮಠಾಧೀಶರು, ಸಚಿವ ಈಶ್ವರ್‌ ಖಂಡ್ರೆ, ಮಾಜಿ ಸಚಿವ ಕೆ.ಗೋಪಾಲಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಮೆಲ್ಲರಿಗೂ ಮಾರ್ಗದರ್ಶಕರಾಗಿದ್ದ ತಿಪ್ಪಣ್ಣ ಅವರು ನಮ ತಂದೆ ಶತಾಯುಷಿ ಭೀಮಣ್ಣ ಖಂಡ್ರೆ ಅವರೊಂದಿಗೆ ಸಮಾಜದ ಅಭ್ಯುದಯಕ್ಕೆ ಶ್ರಮಿಸಿದ್ದರು. ಬಸವಾದಿ ಪ್ರಮಥರ ತತ್ವಗಳನ್ನು ತಮ ಬದುಕಿನಲ್ಲಿ ಅಳವಡಿಸಿಕೊಂಡು ಪಾಲಿಸುತ್ತಿದ್ದ ಅವರು ಸಾವಿರಾರು ವಿದ್ಯಾರ್ಥಿಗಳ ಅನ್ನದಾಸೋಹ, ಜ್ಞಾನದಾಸೋಹಕ್ಕೆ ನೆರವಾಗಿದ್ದರು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿರಿಯ ನ್ಯಾಯವಾದಿಗಳಾಗಿ, ಸಾರ್ವಜನಿಕ ಅಭಿಯೋಜಕರಾಗಿ, ವಕೀಲರ ಪರಿಷತ್ತಿನ ಅಧ್ಯಕ್ಷರಾಗಿ, ವಿಧಾನಪರಿಷತ್‌ ಸದಸ್ಯರಾಗಿ, ಸಭಾಪತಿಗಳಾಗಿ ನಾನಾ ಕ್ಷೇತ್ರದಲ್ಲಿ ಅವರು ರಾಜ್ಯಕ್ಕೆ ಕೊಡುಗೆ ನೀಡಿದ್ದಾರೆ. ಎಲ್ಲ ಕ್ಷೇತ್ರದಲ್ಲೂ ಅವರು ತಮದೇ ಛಾಪು ಮೂಡಿಸಿದ್ದರು. ಸರಳ ಸಜ್ಜನಿಕೆಯ ಸಾಕಾರ ಮೂರ್ತಿಗಳಾಗಿದ್ದ ತಿಪ್ಪಣ್ಣನವರ ಆತಕ್ಕೆ ಈಶ್ವರ ಚಿರಶಾಂತಿ ನೀಡಲಿ, ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಂಧುಮಿತ್ರರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ಸೂಚಿಸಿದ್ದಾರೆ.

RELATED ARTICLES

Latest News