ನವದೆಹಲಿ,ಜು.11– ಬಾಕಿ ಇರುವ ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಸಂಬಂಧಪಟ್ಟಂತೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಿನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲರ ಜೊತೆ ನಾನು, ಡಿ.ಕೆ.ಶಿವಕುಮಾರ್ ಚರ್ಚೆ ಮಾಡಿದ್ದೇವೆ. ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ಅಧ್ಯಕ್ಷರು ಹಾಗೂ ಸದಸ್ಯರನ್ನಾಗಿ ನೇಮಿಸುವ ಬಗ್ಗೆ ಚರ್ಚೆಯಾಗಿದೆ. ಆದರೆ ಯಾವುದೇ ನಿರ್ಣಯ ತೆಗೆದುಕೊಳ್ಳದೆ ಅಪೂರ್ಣವಾಗಿದೆ ಎಂದರು.
ಸುರ್ಜೇವಾಲ ಅವರು ಇದೇ ತಿಂಗಳ 16 ರಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದು, ಆ ವೇಳೆ ಮತ್ತೊಂದು ಸುತ್ತಿನ ಚರ್ಚೆ ಮಾಡಿ ಪಟ್ಟಿಯನ್ನು ಅಂತಿಮಗೊಳಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
- ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನ ಪಡೆಯಲು ಸರ್ಕಾರ ಪ್ರಯತ್ನ : ಎಚ್.ಕೆ. ಪಾಟೀಲ
- ಸಿಎಂ, ಡಿಸಿಎಂ ಮನೆಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಬೆದರಿಕೆ
- ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ : ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ
- ಬೆಂಗಳೂರಲ್ಲಿ ಕುಳಿತು ಅಮೆರಿಕಾದ ಪ್ರಜೆಗಳನ್ನು ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದ ಕಿಲಾಡಿಗಾಗಿ ಪೊಲೀಸರ ಹುಡುಕಾಟ
- ಪೂಜೆ ಮಾಡಿ ನಿಧಿ ತೆಗೆಸಿ ಕೊಡಿಸುವ ನೆಪದಲ್ಲಿ ಕಳ್ಳತನ ಮಾಡಿದ್ದವನ ಬಂಧನ