ಬೆಂಗಳೂರು, ಜು.11-ಉತ್ತರ ವಿಭಾಗದ ಸಂಚಾರ ಪೊಲೀಸರು ಆರ್ಟಿಓ ಅಧಿಕಾರಿಗಳ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ 10 ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಉತ್ತರ ಸಂಚಾರ ವಿಭಾಗದಲ್ಲಿ ಶಾಲಾ ವಾಹನಗಳ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಿ,ಅಧಿಕ ಮಕ್ಕಳನ್ನು ಕರೆದೊಯ್ಯುವುದು, ಮದ್ಯಸೇವನೆ ಮಾಡಿ ವಾಹನ ಚಾಲನೆ ಸೇರಿದಂತೆ ವಿವಿಧ ಸಂಚಾರಿ ನಿಯಮ ಉಲ್ಲಂಘನೆ ಬಗ್ಗೆ ಒಟ್ಟು 771 ವಾಹನಗಳನ್ನು ತಪಾಸಣೆ ಮಾಡಿದ್ದಾರೆ.
ಈ ಪೈಕಿ 6 ಡಿಡಿ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು 10 ವಾಹನಗಳನ್ನು ಜಪ್ತಿ ಮಾಡಿ, ಆರ್ಟಿಓ ಅವರಿಂದ 45 ನೋಟೀಸ್ ನೀಡಲಾಗಿದೆ ಎಂದು ಉಪ ಪೊಲೀಸ್ ಆಯುಕ್ತರಾದ ಸಿರಿಗೌರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ದಾವಣಗೆರೆ : ಸಾಲ ತೀರಿಸಲಾಗದೆ ರೈಲಿಗೆ ತಲೆಕೊಟ್ಟ ತಾಯಿ -ಮಗಳು
- ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನ ಹತ್ಯೆ
- ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟದಲ್ಲಿ ಬಡವಾದ ಕಾರ್ಯಕರ್ತರು
- ಸಂಚಾರ ನಿಯಮ ಉಲ್ಲಂಘಿಸಿದ 10 ಶಾಲಾ ವಾಹನಗಳ ಜಪ್ತಿ
- ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ : 15 ಮಂದಿ ಸೆರೆ, 39.26 ರೂ.ಕೋಟಿ ಮೌಲ್ಯದ ನಗದು, ಆಭರಣ ಜಪ್ತಿ