ಅಹಮದಾಬಾದ್,ಜು.12- ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡಿವೆ. ಆ ನಂತರ ವಿಮಾನ ಪತನವಾಗಿದೆ ಎಂದು ಬಹಿರಂಗಗೊಂಡಿದೆ.
ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್‌ಗಳ ಕಾಕ್‌ಪಿಟ್ ಧ್ವನಿ ರೆಕಾರ್ಡಿಂಗ್ ಡೇಟಾವನ್ನು ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯಲ್-ಎಂಜಿನ್ ಸ್ಥಗಿತಗೊಂಡಿರುವುದು ಅಪಘಾತಕ್ಕೆ ಕಾರಣ ಎಂದು ಸೂಚಿಸಲಾಗಿದೆ.
ಅಪಘಾತಕ್ಕೆ ಕೆಲ ಸೆಕೆಂಡುಗಳಿಗೂ ಮುನ್ನ ನಡೆದ ಸಂಭಾಷಣೆಯ ಒಂದು ಭಾಗದಲ್ಲಿ ಇದು ತಿಳಿದಿದೆ. ಜೊತೆಗೆ ವಿಮಾನವು 8 ಡಿಗ್ರಿ ಮೂಗು ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಇಂಜಿನ್‌ಗಳು ಆಫ್ ಆಗಿದ್ದವು. ಇದರಿಂದ ವಿಮಾನವು ಏರಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿದಿದೆ.
ವಿಮಾನದ ಎಂಜಿನ್‌ಗೆ ಇಂಧನ ಪೂರೈಕೆ ಸ್ಥಗಿತಗೊಂಡಿರುವುದು ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಎಎಐಬಿ ಗಮನಸೆಳೆದಿದೆ. ಆದಾಗ್ಯೂ, ತನಿಖಾ ಬ್ಯೂರೋ, ಈ ವರದಿ ಪ್ರಾಥಮಿಕ ಎಂದು ಹೇಳಿದೆ.
ಪ್ರಸ್ತುತ, ಅಪಘಾತದ ವಿವರವಾದ ತನಿಖೆ ನಡೆಯುತ್ತಿದೆ.ಎಎಐಬಿ ಪ್ರಾಥಮಿಕ ವರದಿಯ ಪ್ರಕಾರ, ಟೇಕಾಫ್ ನಂತರ ಎಂಜಿನ್‌ಗಳ ಇಂಧನ ಸ್ವಿಚ್‌ಗಳು ಇದ್ದಕ್ಕಿದ್ದಂತೆ ಬದಲಾದವು. ಈ ಘಟನೆ ಕೇವಲ 1 ಸೆಕೆಂಡ್ ಅಂತರದಲ್ಲಿ ಸಂಭವಿಸಿದೆ. ಈ ಸಮಯದಲ್ಲಿ, ಎಂಜಿನ್‌ಗಳಿಗೆ ಇಂಧನ ಬರುವುದನ್ನು ನಿಂತುಹೋಗಿದೆ.
ಟೇಕ್ ಆಫ್ ಆದ 3 ಸೆಕೆಂಡ್‌ಗಳ ನಂತರ, ಎರಡೂ ಇಂಜಿನ್‌ಗಳ ಫ್ಯೂಯಲ್ ಕಂಟ್ರೋಲ್ ಸ್ವಿಚ್‌ಗಳು ರನ್ ನಿಂದ ಕಟ್‌ಆಫ್‌ಗೆ ಬದಲಾದವು. ಇದರಿಂದಾಗಿ ಥ್ರಸ್ಟ್ ಇದ್ದಕ್ಕಿದ್ದಂತೆ ಕಡಿಮೆಯಾಯಿತು. ಅಲ್ಲದೇ ಒಬ್ಬ ಪೈಲಟ್ ನೀವು ಏಕೆ ಕಟ್ ಆಫ್ ಮಾಡಿದ್ರಿ? ಎಂದು ಕೇಳುವುದು ಕೇಳಿಸುತ್ತದೆ. ಅದಕ್ಕೆ ಇನ್ನೊಬ್ಬ ಪೈಲಟ್ ನಾನು ಮಾಡಿಲ್ಲ? ಎಂದು ಉತ್ತರಿಸುತ್ತಾರೆ. ಇದರಿಂದ ತಾಂತ್ರಿಕದೋಷ ಅಥವಾ ಆಕಸಿಕವಾಗಿ ಸ್ವಿಚ್ ಆಫ್ ಆಗಿರಬಹುದು ಎಂದು ಶಂಕಿಸಲಾಗಿದೆ.
ಕಾಕ್‌ಪಿಟ್‌ನಲ್ಲಿ ಪೈಲಟ್‌ಗಳ ನಡುವೆ ನಡೆದ ಸಂಭಾಷಣೆಯ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಪ್ರಕಾರ, ಒಬ್ಬ ಪೈಲಟ್ ಮತ್ತೊಬ್ಬ ಪೈಲಟ್ ಬಳಿ, ನೀವು ಎಂಜಿನ್ ಅನ್ನು ಏಕೆ ಆಫ್ ಮಾಡಿದ್ದೀರಿ ಎಂದು ಕೇಳಿದ್ದಾರೆ. ಆಗ ಮತ್ತೊಬ್ಬ ಪೈಟಲ್, ನಾನು ಏನನ್ನೂ ಮಾಡಲಿಲ್ಲ ಎಂದಿದ್ದಾರೆ.
ಇಬ್ಬರು ಪೈಲಟ್‌ಗಳ ನಡುವಿನ ಈ ಸಂಭಾಷಣೆಯನ್ನು ಗಮನಿಸಿದರೆ, ಯಾರೂ ಉದ್ದೇಶಪೂರ್ವಕವಾಗಿ ಇಂಧನ ಸ್ವಿಚ್ ಕಡಿತಗೊಳಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.
ತುರ್ತು ಪರಿಸ್ಥಿತಿ ಅರಿವಿಗೆ ಬರುತ್ತಿದ್ದಂತೆಯೇ ವಿಮಾನದ ಸ್ವಯಂಚಾಲಿತ ವ್ಯವಸ್ಥೆಯನ್ನು ಸಕ್ರಿಯಗೊಳಿಸಲು ಪ್ರಯತ್ನಿಸಲಾಯಿತು. ಆದಾಗ್ಯೂ ರಾಮ್ ಏರ್ ಟರ್ಬೈನ್ ಅಂದರೆ, ತುರ್ತು ಫ್ಯಾನ್ ಮತ್ತು ಎಪಿಯುನಂತಹ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಿದ ನಂತರವೂ, ವಿಮಾನವನ್ನು ಅಪಘಾತದಿಂದ ರಕ್ಷಿಸಲು ಪೈಟಲ್‌ಗಳಿಗೆ ಸಾಧ್ಯವಾಗಲಿಲ್ಲ. ವಿಮಾನದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಇದ್ದಾಗ ಮಾತ್ರ ರಾಮ್ ಏರ್ ಟರ್ಬೈನ್ ಸಕ್ರಿಯವಾಗುತ್ತದೆ. ಇದರರ್ಥ, ಎಂಜಿನ್ ಸ್ಥಗಿತಗೊಂಡಿದ್ದು ವಿಮಾನದ ವಿದ್ಯುತ್ ಪೂರೈಕೆ ಮೇಲೂ ಪರಿಣಾಮ ಬೀರಿತ್ತು.
ಇನ್ನೂ ಫ್ಲೈಟ್ ಡೇಟಾ ರೆಕಾರ್ಡರ್ ಪ್ರಕಾರ, ಇಂಜಿನ್-1 ಅನ್ನು ಸ್ವಯಂಚಾಲಿತವಾಗಿ ಮರುಪ್ರಾರಂಭಿಸಲು ಪ್ರಯತ್ನಿಸಿ, ಅದು ಯಶಸ್ವಿಯಾಯಿತು. ಆದ್ರೆ ಇಂಜಿನ್ 2 ಅನ್ನು ಮರುಪ್ರಾರಂಭಿಸಲು ಸಾಧ್ಯವಾಗಲಿಲ್ಲ. ಈ ಕಾರಣಕ್ಕಾಗಿ ರಾಮ್ ಏರ್ ಟರ್ಬೈನ್ ಅನ್ನು ತುರ್ತು ವಿದ್ಯುತ್ ಮೂಲವಾಗಿ ಬಳಸಲಾಗಿತ್ತು. ಇದು ಟೇಕ್ ಆಫ್ ಆದ ತಕ್ಷಣವೇ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ಇದರಿಂದ ಅಗತ್ಯ ಸಿಸ್ಟಮ್‌ಗಳಿಗೆ ವಿದ್ಯುತ್ ಸಂಪೂರ್ಣವಾಗಿ ಸ್ಥಗಿತಗೊಂಡಿತು ಎಂದು ವರದಿ ತಿಳಿಸಿದೆ.ರ್ಯಟ್ ಎಂದರೆ ಅಂದರೆ ವಿಮಾನದಲ್ಲಿನ ಎಲೆಕ್ಟ್ರಿಕಲ್ ವ್ಯವಸ್ಥೆ ಕೈಕೊಟ್ಟಾಗ ಉಪಯೋಗಿಸುವ ಒಂದು ಸಾಧನ.
ಮೇ ಡೇ ಕೊನೆಯ ಸಂದೇಶ: ವಿಮಾನವು ಏರ್ಪೋರ್ಟ್‌ನ ಹೊರಗಿನ ಕಟ್ಟಡಗಳಿಗೆ ಡಿಕ್ಕಿ ಹೊಡೆಯುವ ಕೆಲವೇ ಸೆಕೆಂಡುಗಳ ಮೊದಲು, 08:09:05 ಯುಟಿಸಿಗೆ ತುರ್ತು ಕರೆ ಮಾಡಲಾಯಿತು. ಈ ವೇಳೆ ಮೇ ಡೇ ಎಂಬ ಸಂದೇಶವನ್ನು ಪೈಲಟ್ ಕೊಟ್ಟಿದ್ದರು. ಏರ್‌ಇಂಡಿಯಾ ಬೋಯಿಂಗ್ 787-8 ವಿಮಾನ ಜೂನ್ 12 ರಂದು ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೊರಟ ಸ್ವಲ್ಪ ಸಮಯದ ನಂತರ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಆವರಣಕ್ಕೆ ಅಪ್ಪಳಿಸಿತ್ತು. ವಿಮಾನದಲ್ಲಿದ್ದ 241 ಪ್ರಯಾಣಿಕರು ಸೇರಿದಂತೆ 275 ಜನರು ಸಾವನ್ನಪ್ಪಿದ್ದರು.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-08-2025)
- ಕೇಸರಿ ಶಾಲು ಧರಿಸಿದ್ದ ಟ್ರಾವಲ್ಸ್ ಕಾರ್ಮಿಕ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಮೂವರು ಕಿಡಿಗೇಡಿಗಳ ಸೆರೆ
- ರೌಡಿ ಬಿಕ್ಲುಶಿವ ಕೊಲೆಯ ಪ್ರಮುಖ ಆರೋಪಿ ಜಗ್ಗಿ ಅರೆಸ್ಟ್
- ಆರ್ಎಸ್ಎಸ್ನ ಪ್ರಾರ್ಥನೆ ಮಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿಸಿಎಂ ಡಿಕೆಶಿ
- “ಟೆಸ್ಟ್ ಕ್ರಿಕೆಟ್ನಿಂದ ಕೊಹ್ಲಿ ನಿವೃತ್ತಿ ನಿರ್ಧಾರದ ಹಿಂದೆ ಏನೋ ಅಸಾಮಾನ್ಯ ಇರಬಹುದು”