ಪಾಟ್ನಾ, ಜು.12- ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಪಾಟ್ನಾದ ರಾಣಿತಲಾಬ್ ಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಮೃತರನ್ನು ನಿರ್ಮಲಾ ದೇವಿ (52), ನೀತು ಸಿಂಗ್ (35) ಮತ್ತು ಅಷ್ಟಿತ್ವಾ ಸಿಂಗ್ (10) ಎಂದು ಗುರುತಿಸಲಾಗಿದೆ. ಸಾರೈ ಗ್ರಾಮದಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.ಛತ್ತೀಸ್‌ಗಢದಿಂದ ಬಂದ ಒಂದೇ ಕುಟುಂಬದ ಐದು ಸದಸ್ಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಇದ್ದಕ್ಕಿದ್ದಂತೆ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಕಾಲುವೆಗೆ ಬಿದ್ದಿದೆ . ಪೊಲೀಸರು ಸ್ಥಳಕ್ಕೆ ತಲುಪಿ ಗಾಯಗೊಂಡಿದ್ದ ಎಲ್ಲರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರುಎಂದು ರಾಣಿತಲಾಬ್ ಪೊಲೀಸ್ ಠಾಣೆಯ ಅಧಿಕಾರಿ ಪ್ರಮೋದ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು. ಇತರ ಇಬ್ಬರು ಗಾಯಾಳುಗಳು ಚಿಕಿತ್ಸೆಪಡೆಯುತ್ತಿದ್ದಾರೆ ಮತ್ತು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.