Sunday, July 13, 2025
Homeರಾಷ್ಟ್ರೀಯ | Nationalಕೋಲ್ಕತ್ತಾ : ಐಐಎಂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಕೋಲ್ಕತ್ತಾ : ಐಐಎಂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Student of IIM Calcutta arrested for allegedly raping a woman on campus

ಕೋಲ್ಕತ್ತಾ,ಜು.12- ಕೋಲ್ಕತ್ತಾದ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಹರಿದೇವಪುರ ಪೊಲೀಸ್‌‍ ಠಾಣೆಯಲ್ಲಿ ವಿದ್ಯಾರ್ಥಿನಿ ದಾಖಲಿಸಿದ ಎಫ್‌ಐಆರ್‌ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಐಎಂ-ಕಲ್ಕತ್ತಾದ ಬಾಲಕರ ಹಾಸ್ಟೆಲ್‌ ಒಳಗೆ ಈ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿರುವ ದೂರಿನಲ್ಲಿ ತನ್ನನ್ನು ಕೌನ್ಸೆಲಿಂಗ್‌ ಅವಧಿಗಾಗಿ ಹಾಸ್ಟೆಲ್‌ಗೆ ಕರೆಸಲಾಗಿತು.ನಂತರ ಹಾಸ್ಟೆಲ್‌ನಲ್ಲಿ ಮಾದಕದ್ರವ್ಯ ಬೆರೆಸಿದ ಪಾನೀಯ ಸೇವಿಸಿ ಪ್ರಜ್ಞಾಹೀನಳಾದೆ. ಪ್ರಜ್ಞೆ ಮರಳಿದ ನಂತರ ತನ್ನ ಮೇಲೆ ಅತ್ಯಾಚಾರ ನಡೆದಿರುವುದು ಗಮನಕ್ಕೆ ಬಂದಿತು ಎಂದು ತಿಳಿಸಿದ್ದಾರೆ.

ಈ ವಿಷಯವನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆಂದು ಪೊಲೀಸ್‌‍ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ಬಂಧಿಸಿ ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ. ಕೋಲ್ಕತ್ತಾದ ಕಾನೂನು ಕಾಲೇಜಿನೊಳಗೆ ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಸುಮಾರು ಹದಿನೈದು ದಿನಗಳ ನಂತರ ಈ ಘಟನೆ ನಡೆದಿದೆ.

RELATED ARTICLES

Latest News