Sunday, July 13, 2025
Homeಇದೀಗ ಬಂದ ಸುದ್ದಿಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಜೀವ ಬೆದರಿಕೆ

ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಜೀವ ಬೆದರಿಕೆ

Union Minister Chirag Paswan receives life threat

ಪಾಟ್ನಾ,ಜು.12- ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್‌ ವಿಲಾಸ್‌‍) ಅಧ್ಯಕ್ಷ ಚಿರಾಗ್‌ ಪಾಸ್ವಾನ್‌ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್‌ ಭಟ್‌ ತಿಳಿಸಿದ್ದಾರೆ.

ಜೀವ ಬೆದರಿಕೆ ಹಿನ್ನೆಲೆ ರಾಜೇಶ್‌ ಭಟ್‌ ಪಾಟ್ನಾದ ಸೈಬರ್‌ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಟೈಗರ್‌ ಮೆರಾಜ್‌ ಇಡಿಸಿ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಿಂದ ಚಿರಾಗ್‌ ಪಾಸ್ವಾನ್‌ಗೆ ಜೀವ ಬೆದರಿಕೆ ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪಾಸ್ವಾನ್‌ ಅವರ ಜನಪ್ರಿಯತೆ ಹೆಚ್ಚುತ್ತಿರುವ ಕಾರಣ ಈ ಬೆದರಿಕೆ ಹಾಕಲಾಗಿದೆ. ಈ ಕೃತ್ಯ ಕ್ರಿಮಿನಲ್‌ ಉದ್ದೇಶ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ. ವಿಷಯದ ಗಂಭೀರತೆಯನ್ನು ತಕ್ಷಣವೇ ಅರಿತು ತ್ವರಿತ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ ಎಂದು ರಾಜೇಶ್‌ ಭಟ್‌ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸೈಬರ್‌ ಡಿಸಿಪಿ ನಿತೀಶ್‌ಚಂದ್ರ ಧರಿಯಾ, ಜುಲೈ 11ರ ರಾತ್ರಿ 9 ಗಂಟೆ ಸುಮಾರಿಗೆ ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಅವರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಪಾಟ್ನಾ ಸೈಬರ್‌ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

RELATED ARTICLES

Latest News