Monday, July 14, 2025
Homeಮನರಂಜನೆಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್‌‍ ಶಾಸಕರೇ ಬೀದಿಯಲ್ಲಿ ಮಾತಾಡುತ್ತಿದ್ದಾರೆ : ನಿಖಿಲ್‌ ವಾಗ್ದಾಳಿ

ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್‌‍ ಶಾಸಕರೇ ಬೀದಿಯಲ್ಲಿ ಮಾತಾಡುತ್ತಿದ್ದಾರೆ : ನಿಖಿಲ್‌ ವಾಗ್ದಾಳಿ

Congress MLAs are talking on the streets about guarantees

ಮಾಲೂರು, ಜು.13-ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್‌‍ ಶಾಸಕರೇ ಬೀದಿಯಲ್ಲಿ ನಿಂತು ಮಾತನಾಡುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮುಂಚೆ ನೀವು ಕೊಟ್ಟ ಭರವಸೆ ಏನಾಯಿತು? ಎಂದು ರಾಜ್ಯ ಸರ್ಕಾರಕ್ಕೆ ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿಯವರು ಪ್ರಶ್ನಿಸಿದ್ದಾರೆ.

ಮಾಲೂರಿನಲ್ಲಿ ನ್ನಿನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪೂರ್ವ ಮತ್ತು ನಂತರದ ಡಿಸಿಎಂ ಡಿ.ಕೆ. ಶಿವಕುಮಾರ್‌ ರವರ ಹೇಳಿಕೆ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಎಲ್ಲಿ ನೋಡಿದರೂ ವೈರಲ್‌ ಆಗಿದೆ.. ಪ್ರತಿ ತಿಂಗಳು ಗ್ಯಾರಂಟಿ ಕೊಡೋದಕ್ಕೆ ಆಗಲ್ಲ, ಯಾವಾಗ ಆಗುತ್ತೋ ಆಗ ಕೊಡುತ್ತೇವೆಂದು ಹೇಳಿದ್ದಾರೆ. ಯಾವಾಗ ಕೊಡುತ್ತೀರಾ? ರಾಜ್ಯದ ಜನತೆ ಕೇಳುತ್ತಿದ್ದಾರೆ ಹೇಳಿ ಎಂದು ಆಗ್ರಹಿಸಿದ್ದಾರೆ.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ.ರೇವಣ್ಣ ಅವರೇ ಹೇಳಿದ್ದಾರೆ ಮೂರು ತಿಂಗಳಿಗೆ ಒಮೆ ಕೊಡುತ್ತೇವೆ ಅಂಥ. ಮತ್ತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ಕೊಡುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ. ಮುಂದೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಬಂದಾಗ ಕೊಡುತ್ತಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಜನರೊಂದಿಗೆಜನತಾದಳ ಅಭಿಯಾನ 50 ಲಕ್ಷ ಜನರ ಸದಸ್ಯತ್ವದ ಗುರಿಯೊಂದಿಗೆ ರಾಜ್ಯದಲ್ಲಿ ಪಕ್ಷ ಸಂಘಟನೆಗಾಗಿ ಪ್ರವಾಸ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News