ರಾಮನಗರ,ಜು.13- ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್‌ವೇನ ಜಯಪುರ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಚಿಕ್ಕನಾಯಕನಹಳ್ಳಿಯ ತಮಣ್ಣ ಗೌಡ (56) ಪುತ್ರ ಮುತ್ತುರಾಜ್ (28) ಹಾಗೂ ಹಾಸನ ಮೂಲದ ಚಾಲಕ ಸಚಿನ್ (27) ಮೃತಪಟ್ಟ ದುರ್ದೈವಿಗಳು.ಬೆಂಗಳೂರಿನಲ್ಲಿ ವಾಸವಾಗಿದ್ದ ಇವರು ಮಡುವಿನಕುಡಿ ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ತೆರಳಿ ಇಂದು ಬೆಳಗ್ಗೆ ಮೈಸೂರಿನಿಂದ ಬೆಂಗಳೂರಿಗೆ ಸ್ವಿಫ್‌್ಟ ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ ಜಯಪುರ ಗೇಟ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ತಡೆಗೊಡೆಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಾಲನೆ ಮಾಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೇ ರಾಮನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.ಎಕ್ಸ್ ಪ್ರೆಸ್‌ವೇನಲ್ಲಿ ಸಿಸಿ ಕ್ಯಾಮಾರಾ ಅಳವಡಿಸಿದ್ದಾಗಿನಿಂದ ಅಪಘಾತಗಳು ತುಸು ನಿಯಂತ್ರಣಕ್ಕೆ ಬಂದಿತ್ತು, ಆದರೆ ವಿಕೆಂಡ್‌ನಲ್ಲಿ ಈ ರಸ್ತೆಯಲ್ಲಿ ಕಾರುಗಳ ಕಾರುಬಾರು ಜೋರಾಗಿರುತ್ತದೆ. ಗಾಳಿಯಲ್ಲಿ ತೆಲುವಂತೆ ಕಾರುಗಳು ಸಂಚರಿಸುತ್ತವೆ ಚಾಲಕರು ನಿಯಂತ್ರಣದಲ್ಲಿ ವಾಹನ ಚಲಾಯಿಸಿದರೆ ಅಪಘಾತಗಳನ್ನು ತಡೆಯಬಹುದಾಗಿದೆ.
- ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ವಹಿಸುವ ಅಗತ್ಯವಿಲ್ಲ : ಪರಮೇಶ್ವರ್
- ಟಿ20 ಕ್ರಿಕೆಟ್ಗೆ ಮಿಚೆಲ್ ಸ್ಟಾರ್ಕ್ ವಿದಾಯ
- ಶಾಸಕ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ
- ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಹಾರೈಕೆ
- ಉದ್ಯಮಿ ಅಪಹರಿಸಿ ಜೀವ ಬೆದರಿಕೆ ಹಾಕಿ 3 ಲಕ್ಷ ರೂ. ಪಡೆದಿದ್ದ ನಾಲ್ವರು ರೌಡಿ ಸೇರಿ 6 ಮಂದಿ ಅರೆಸ್ಟ್