ನಿತ್ಯ ನೀತಿ : ಸಂತೋಷ ಎನ್ನುವುದು ಯಾವತ್ತೂ ಮನಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಅವಲಂಬಿಸಿದೆ. ಉಕ್ಕುವ ಹಾಲು ಗೃಹ ಪ್ರವೇಶದ ದಿನ ನೀಡುವ ಸಂತೋಷವನ್ನು ಬೇರೆ ದಿನ ನೀಡುವುದಿಲ್ಲ. ಕ್ರಿಯೆ ಒಂದೇ ಆದರೂ ಪ್ರತಿಕ್ರಿಯೆ ವಿಭಿನ್ನ.
ಪಂಚಾಂಗ : ಸೋಮವಾರ, 14-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಧನಿಷ್ಠಾ / ಯೋಗ: ಆಯು / ಕರಣ: ಭವ
ಸೂರ್ಯೋದಯ – ಬೆ.06.01
ಸೂರ್ಯಾಸ್ತ – 06.50
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ವೃಷಭ: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.
ಮಿಥುನ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಕಟಕ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ಕನ್ಯಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ತುಲಾ: ಆಭರಣ ವ್ಯಾಪಾರಸ್ಥ ರಿಗೆ ಕೆಲಸಗಾರರಿಂದ ಮೋಸ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.
ಮಕರ: ನಿಮ್ಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ. ವ್ಯಾಸಂಗದಲ್ಲಿ ತೊಂದರೆ.
ಕುಂಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮೀನ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
- ಅಂತರಾಳದ ಶ್ವಾಸಕೋಶ ಕಾಯಿಲೆ ಹೆಚ್ಚಳ: ಇದಕ್ಕೆ ಕಾರಣವೇನು? ಚಿಕಿತ್ಸಾ ಆಯ್ಕೆಗಳ ಬಗ್ಗೆ ಇಲ್ಲಿದೆ ಮಾಹಿತಿ
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-07-2025)
- ಪೊಲೀಸ್ ಕಸ್ಟಡಿ ಸಾವು ವಿರೋಧಿಸಿ ಬೀದಿಗಿಳಿದ ವಿಜಯ್
- ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರ ಆತ್ಮಹತ್ಯೆ
- ಬೆಳಗಾವಿ : ನಡು ರಸ್ತೆಯಲ್ಲೇ ಯುವ ಗಾಯಕನ ಬರ್ಬರ ಹತ್ಯೆ