ಬೆಂಗಳೂರು,ಜು.15- ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂಬ ವಿರೋಧ ಪಕ್ಷಗಳ ಟೀಕಾಪ್ರಹಾರದ ನಡುವೆ ಸರ್ಕಾರ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಮಾಡಿದೆ.ಬೆಂಗಳೂರು ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಮೂರು ವಿಭಾಗಗಳಿಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಪ್ರಮುಖವಾಗಿ ಕರಾವಳಿ ಮತ್ತು ಬೆಂಗಳೂರನ್ನು ಕೇಂದ್ರೀಕರಿಸಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹಲವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಿ ಅಚ್ಚರಿ ಮೂಡಿಸಿದೆ.
ಇಲ್ಲಿದೆ ವರ್ಗಾವಣೆಗೊಂಡ ಅಧಿಕಾರಿಗಳ ವಿವರ :