
ಅಮರಾವತಿ,ಜು.14-ಮಾವು ತುಂಬಿದ ಲಾರಿಯೊಂದು ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹನ್ನೊಂದು ಜನರು ಗಾಯಗೊಂಡಿರು ಘಟನೆ ಅಂಧ್ರದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು ಬಳಿ ನಡೆದಿದೆ.
ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡು ಸಮತೋಲನ ಕಳೆದುಕೊಂಡು ಮಿನಿ ಟ್ರಕ್ ಮೇಲೆ ಬಿದ್ದಾಗ ಇದು ದುರಂತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾವು ಲಾರಿಯ ಮೇಲೆ ಸುಮಾರು 20 ಕ್ಕೂ ಹೆಚ್ಚು ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ದಾವಿಸಿದ ಪೊಲೀಸರು ಗಾಯಾಳುಗಳನ್ನು ಆಂಬುಲೆನ್ ಮೂಲಕ ರಾಜಂಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಬದುಕುಳಿದ ಟ್ರಕ್ ಚಾಲಕನ ಮಾಹಿತಿಯಂತೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸುವಾಗ ನಿಯಂತ್ರಣ ತಪ್ಪಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಅನ್ನಮಯ್ಯ ಜಿಲ್ಲೆಯ ರೈಲೇ ಕೊಡೂರು ಮಂಡಲ ಮತ್ತು ತಿರುಪತಿ ಜಿಲ್ಲೆಯ ವೆಂಕಟಗಿರಿ ಮಂಡಲದ 21 ದಿನಗೂಲಿ ಕಾರ್ಮಿಕರ ಗುಂಪು ರಾಜಂಪೇಟೆ ಮಂಡಲದ ಎಸುಕಪಲ್ಲಿ ಮತ್ತು ಸುತ್ತಮುತ್ತಲಿನ ಹಳ್ಳಿಗಳ ತೋಟಗಳಿಂದ ಮಾವು ಕೀಳಲು ಹೋಗಿದ್ದರು. ಮಾವಿನ ಹೊರೆಯೊಂದಿಗೆ, ಟ್ರಕ್ ರೈಲ್ವೆ ಕೊಡೂರು ಮಾರುಕಟ್ಟೆಗೆ ಹೋಗುತ್ತಿತ್ತು, ಮತ್ತು ಕಾರ್ಮಿಕರು ಮಾವಿನ ಹೊರೆಯ ಮೇಲೆ ಕುಳಿತಿದ್ದರು.
ಕಾರ್ಮಿಕರು 30-40 ಟನ್ ಮಾವಿನ ಹಣ್ಣುಗಳ ಅಡಿಯಲ್ಲಿ ಸಿಲುಕಿಕೊಂಡರು. ಪೊಲೀಸರು ಸ್ಥಳಕ್ಕೆ ಧಾವಿಸಿ ಜೆಸಿಬಿ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.
- ಕಾರ್ಕಳದ ಪರಶುರಾಮ ಪ್ರತಿಮೆ ಪೈಬರ್ನಿಂದ ಮಾಡಿದ್ದು ಎಂದು ಅಪಪ್ರಚಾರ ಮಾಡಿದ್ದ ಕಾಂಗ್ರೆಸಿಗರಿಗೆ ಮುಖಭಂಗ..!
- ಸಚಿವರು, ಶಾಸಕರ ಜತೆ ಸುರ್ಜೆವಾಲ ಮತ್ತೆ ಸಭೆ
- ಗ್ಯಾರಂಟಿ ಸರ್ಕಾರದಿಂದ ಶಕ್ತಿಯೋಜನೆ ಯಶಸ್ಸಿನ ಸಂಭ್ರಮಾಚರಣೆ, ಖುದ್ದು ಉಚಿತ ಟಿಕೆಟ್ ವಿತರಿಸಿದ ಸಿಎಂ
- ಸಿಗಂದೂರು ಸೇತುವೆ ಉದ್ಘಾಟನೆಗೆ ನನಗೆ ಆಹ್ವಾನ ನೀಡಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ
- ಸಿಗಂಧೂರಿಗೆ ಸಂಪರ್ಕ ಕಲ್ಪಿಸುವ ದೇಶದ 2ನೇ ಅತಿದೊಡ್ಡ ತೂಗು ಸೇತುವೆ ಲೋಕಾರ್ಪಣೆ