ಬೆಂಗಳೂರು,ಜು.17-ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ `ಮನೆ ಮನೆಗೆ ಪೊಲೀಸ್’ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಗೃಹ ಇಲಾಖೆ ನಾಳೆಯಿಂದ ಹಮಿಕೊಂಡಿದೆ.
ನಾಳೆ ಬೆಳಗ್ಗೆ 10.30 ಕ್ಕೆ ಗೋವಿಂದರಾಜನಗರ ವಾರ್ಡ್‌ನಲ್ಲಿರುವ ಎಂ.ಸಿ ಲೇಔಟ್‌ನಲ್ಲಿ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್, ಡಿಜಿ-ಐಜಿಪಿ, ಡಾ.ಎಂ.ಎ ಸಲೀಂ,ನಗರ ಪೊಲೀಸ್ ಆಯುಕ್ತರಾದ ಸೀಮಂತ್‌ಕುಮಾರ್ ಸಿಂಗ್ ಅವರು ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.
`ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಮುಕ್ತವಾಗಿ ಮಹಿಳೆಯರ ಸಮಸ್ಯೆಯನ್ನು ಬೀಟ್‌ಗಳಲ್ಲಿಯೇ ಆಲಿಸಲಿದ್ದಾರೆ. ಮಹಿಳೆ ಮತ್ತು ಮಕ್ಕಳ ಸುರಕ್ಷತೆಯನ್ನು ಖಾತ್ರಿಪಡಿಸಿ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದು, ಕೌಟುಂಬಿಕ ದೌರ್ಜನ್ಯ ವಿರುದ್ಧ ಜಾಗೃತಿ ಮತ್ತು ಕಾನೂನಿನ ಅರಿವು ಮೂಡಿಸಲಿದ್ದಾರೆ.
ಪೊಲೀಸ್ ಸೇವೆಗಳ ಪ್ರತಿಯೊಂದು ಸ್ತರದಲ್ಲೂ ಸಾರ್ವಜನಿಕರ ಬೆಂಬಲ ಮತ್ತು ಸಹಭಾಗಿತ್ವ ಸಾಧಿಸಿಕೊಳ್ಳುವುದರಿಂದ ಮಾತ್ರವೇ ಉತ್ಕೃಷ್ಟ ಸೇವೆಯನ್ನು ಒದಗಿಸಲು ಸಾಧ್ಯ. ಈ ನಿಟ್ಟಿನಲ್ಲಿ ಈಗಾಗಲೇ ಪ್ರತಿಯೊಂದು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಬ್-ಬೀಟ್‌ಗಳನ್ನಾಗಿ ವಿಂಗಡಿಸಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.
ಇನ್ನು ಮುಂದೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಮನೆ ಮನೆಗೂ ಭೇಟಿ ನೀಡಿ ಸಾರ್ವಜನಿಕರ ದೂರುಗಳನ್ನು ಆಲಿಸಿ, ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನಿಸಲಿದ್ದಾರೆ.
ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧಗಳನ್ನು ತಡೆಗಟ್ಟುವುದು,ಅಪರಾಧಗಳನ್ನು ಪತ್ತೆಹಚ್ಚುವುದು, ಸಮಾಜದಲ್ಲಿ ನಿರ್ಭಯ ವಾತಾವರಣವನ್ನು ಸೃಷ್ಟಿಸುವ ಜೊತೆಗೆ ರಕ್ಷಣೆ ಮತ್ತು ಸುರಕ್ಷತೆ ಒದಗಿಸುವ ಗುರುತರವಾದ ಜವಾಬ್ದಾರಿಗಳು ಪೊಲೀಸ್ ಇಲಾಖೆಯ ಮೇಲಿವೆ.ಬನ್ನಿ, ಅಂಜಿಕೆ ಇಲ್ಲದೆ ಮುಕ್ತ ಮನಸ್ಸಿನೊಂದಿಗೆ ಸಮಸ್ಯೆಗಳನ್ನು ಪೊಲೀಸರೊಂದಿಗೆ ಹಂಚಿಕೊಳ್ಳಿ.
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ
- ಟಿಆರ್ಎಫ್ನ್ನು ಜಾಗತಿಕ ಭಯೋತ್ಪಾದಕ ಸಂಘಟನೆಗೆ ಎಂದು ಘೋಷಿಸಿದ ಅಮೆರಿಕ ; ಭಾರತ ಸ್ವಾಗತ