ಹನೂರು, ಜು.19– ತಾಲ್ಲೂಕಿನ ಪ್ರಸಿದ್ದ ಪುಣ್ಯ ಕ್ಷೇತ್ರ ಮಲೆ ಮಹದೇಶ್ವರಬೆಟ್ಟ ಮಾದಪ್ಪನ ದೇಗುಲದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, 30 ದಿನದಲ್ಲಿ 2.36 ಕೋಟಿ ರೂ. ಸಂಗ್ರಹವಾಗಿದೆ. ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 2,36,73,185.00/- ಕೋಟಿ ರೂ ನಗದು ರೂಪದಲ್ಲಿ (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 70ಗ್ರಾಂ, ಬೆಳ್ಳಿ 01 ಕೆ.ಜಿ 712 ಗ್ರಾಂ ಸಂಗ್ರಹವಾಗಿದೆ.
ಪ್ರತಿಬಾರಿಯಂತೆ ಈ ಬಾರಿಯೂ 20 ವಿದೇಶಿ ನೋಟುಗಳು ಮತ್ತು 2 ಸಾವಿರ ಮುಖ ಬೆಲೆ 14 ನೋಟುಗಳು ಹುಂಡಿಯಲ್ಲಿ ದೊರೆತಿವೆ. ಭಕ್ತರಿಂದ ಹರಕೆ ರೂಪದಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಕಾಣಿಕೆ ಸಂಧಿರುವುದು ಅಮಾವಾಸ್ಯೆ-ಹುಣ್ಣಿಮೆ, ರಜೆ ದಿನಗಳು, ಸರ್ಕಾರ ಶಕ್ತಿ ಯೋಜನೆ ಮಹಿಳೆಯರ ಉಚಿತ ಪ್ರಯಾಣ, ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೇತ್ರಕ್ಕೆ ಭೇಟಿ ನೀಡಿದ್ದರಿಂದ ಇಷ್ಟು ದೊಡ್ಡ ಮೊತ್ತದ ಸಂಗ್ರಹವಾಗಿದೆ.
ಮಹದೇಶ್ವರ ಬೆಟ್ಟ ಬಸ್ ನಿಲ್ದಾಣದ ವಾಣಿಜ್ಯ ಕಟ್ಟಡದಲ್ಲಿ ಸಿಸಿ ಕ್ಯಾಮೆರಾ ಹಾಗೂ ಪೊಲೀಸರ ಕಣ್ಣಾವಲಿನಲ್ಲಿ ಪ್ರಾಧಿಕಾರದ ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಫ್ ಬರೋಡ ಸ್ಥಳೀಯ ಶಾಖೆ ಸಿಬ್ಬಂದಿಗಳು ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.
ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರ ಮಹದೇವು.ಸಿ, ಲೆಕ್ಕಧೀಕ್ಷಕ ಗುರು ಮಲ್ಲಯ್ಯ, ಸರಗೂರು ಮಹದೇವಸ್ವಾಮಿ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಶ್ವೇತ, ಪ್ರ.ದ.ಸ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಗೂ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯರುಗಳಾದ ಮರಿಸ್ವಾಮಿ, ಕಾಗಲವಾಡಿ, ಭಾಗ್ಯಮ್ಮ, ಕುಪ್ಯಾ, ವರುಣಾ ಈ ವೇಳೆ ಹಾಜರಿದ್ದರು.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-07-2025)
- ತುಮಕೂರಿನಲ್ಲಿ ತ್ಯಾಜ್ಯ ಸಂಗ್ರಹಣೆಗೆ ಸ್ವಿಗ್ಗಿ, ಜುಮೊಟೊ, ಬಿಂಕ್ಲಿಟ್ ಮಾದರಿಯ ಹೊಸ ಯೋಜನೆ
- ಎಲ್ಲಾ ಪಕ್ಷಗಳ ಶಾಸಕರಿಗೂ ಸಮಾನ ಅನುದಾನ ನೀಡದಿದ್ದರೆ ಉಗ್ರ ಹೋರಾಟ : ಸಿ.ಬಿ.ಸುರೇಶ್ಬಾಬು ಎಚ್ಚರಿಕೆ
- ಬೆಂಗಳೂರು ವಿಮಾನ ನಿಲ್ದಾಣದಲ್ಲಿ 40 ಕೋಟಿ ಮೌಲ್ಯದ ಕೊಕೇನ್ ಜಪ್ತಿ
- ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರಿಗೆ ಸೂಚನೆ