ರಾಯ್‌ಪುರ, ಜು.19- ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಎಕೆ -47 ಮತ್ತು ರೈಫಲ್‌ಗಳು, ಸ್ಫೋಟಕಗಳು ಪತ್ತೆಯಾಗಿವೆ. ನಾರಾಯಣಪುರ ಜಿಲ್ಲೆಯ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.
ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
ನಕ್ಸಲರ ಭದ್ರಕೋಟೆಯಾದ ಅಬುಜ್‌ಮದ್ ಕೋರ್ ವಲಯದಲ್ಲಿ ಮಾವೋವಾದಿಗಳ ವಿರುದ್ಧ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಈ ಎನ್‌ಕೌಂಟರ್ ಸಹ ಒಂದಾಗಿದೆ. ಈ ಪ್ರದೇಶದಲ್ಲಿ ಮಾವೋವಾದಿಗಳ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಅಪಾರ ಪ್ರಮಾಣದ ಸ್ಫೋಟಕ, ಬಂದೂಕುಗಳು ಹಾಗೂ ದಿನಸಿ ಪದಾರ್ಥಗಳು ಪತ್ತೆಯಾಗಿವೆ. ಅಧಿಕಾರಿಗಳು ಅವುಗಳನ್ನು ಜಪ್ತಿ ಮಾಡಿದ್ದಾರೆ.ಜೂನ್ 6 ರಂದು, ಛತ್ತೀಸ್‌ಗಢದ ಬಿಜಾಪುರದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ತಲೆಗೆ 45 ಲಕ್ಷ ರೂ. ಬಹುಮಾನ ಹೊಂದಿದ್ದ ನಕ್ಸಲ್ ನಾಯಕ ಭಾಸ್ಕರ್ ಹತ್ಯೆಗೀಡಾಗಿದ್ದ.
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ
- ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರ ಮದುವೆ : ಹಿಮಾಚಲದಲ್ಲಿ ಮರುಜೀವ ಪಡೆದ ಬಹುಪತಿತ್ವ