Sunday, July 20, 2025
Homeರಾಷ್ಟ್ರೀಯ | Nationalಅಹಮದಾಬಾದ್ : 3 ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

ಅಹಮದಾಬಾದ್ : 3 ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

Gujarat shocker: Family of 5 members die by suicide in Ahmedabad; probe underway

ಅಹಮದಾಬಾದ್, ಜು.20- ಗುಜರಾತ್‌ನ ಬಗೋದರ ಗ್ರಾಮದ ಮನೆಯೊಂದರಲ್ಲಿ ಇಂದು ಮುಂಜಾನೆ ದಂಪತಿ ಮತ್ತು ಅವರ ಮೂವರು ಮಕ್ಕಳ ಶವಗಳು ಪತ್ತೆಯಾಗಿದ್ದು, ಇದು ಸಾಮೂಹಿಕ ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತರನ್ನು ವಿಪುಲ್ ವಫ್‌ಲಾ (32), ಅವರ ಪತ್ನಿ ಸೋನಾಲ್(26) ಮತ್ತು ಅವರ ಮಕ್ಕಳಾದ ಕರೀನಾ (11), ಮಯೂರ್(8) ಮತ್ತು ಪ್ರಿನ್ಸೆಸ್ (5) ಎಂದು ಗುರುತಿಸಲಾಗಿದೆ ಎಂದು ಬಗೋದರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯರ ಮಾಹಿತಿ ಮೇಲೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಅಹಮದಾಬಾದ್ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ಜಾಟ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೋರುತ್ತದೆ. ಇದರ ಹಿಂದಿನ ಕಾರಣವನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ದಂಪತಿ-ಮಕ್ಕಳು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ವಿಪುಲ್ ವಫ್‌ಲಾ ಜೀವನೋಪಾಯಕ್ಕಾಗಿ ಆಟೋರಿಕ್ಷಾ ಓಡಿಸುತ್ತಿದ್ದರು ಎಂದು ಅಧಿಕಾರಿ ಹೇಳಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನೆಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

RELATED ARTICLES

Latest News