ನವದೆಹಲಿ,ಜು.22– ಸಾರ್ವಜನಿಕ ಜೀವನ ಮತ್ತು ಆಡಳಿತಕ್ಕೆ ಜಗದೀಪ್ ಧನ್ಕರ್ ಅವರ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಮುಂದಿನ ಆರೋಗ್ಯ ಮತ್ತು ಯೋಗಕ್ಷೇಮ ಚೆನ್ನಾಗಿರಲಿ ಎಂದು ಪ್ರಧಾನಿ ನರೇಂದ್ರಮೋದಿ ಹಾರೈಸಿದ್ದಾರೆ.
ಈ ಕುರಿತು ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಧನ್ಕರ್ ಅವರು ಉಪರಾಷ್ಟ್ರಪತಿಯಾಗಿ ಮುಖ್ಯವಾದ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ವಿಶೇಷವಾಗಿ ದೇಶದ ಉಪರಾಷ್ಟ್ರಪತಿಯಾಗಿ ರಾಷ್ಟ್ರಕ್ಕೆ ಸಲ್ಲಿಸಿದ ಸಮರ್ಥಿತ ಸೇವೆ ಎಂದಿಗೂ ಮರೆಯಲು ಸಾಧ್ಯವಿಲ್ಲ.
ಅವರ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಮೋದಿ ಅವರು ಹಾರೈಸಿದ್ದಾರೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಮೋದಿಯವರು ಟ್ವೀಟ್ ಮಾಡಿದ್ದಾರೆ.
- ಬೆಂಬಲ ಬೆಲೆಯೊಂದಿಗೆ ಮಾವು ಖರೀದಿ ಮಿತಿ 200 ಕ್ವಿಂಟಾಲ್ಗೆ ವಿಸ್ತರಣೆ
- ಧರ್ಮಸ್ಥಳದಲ್ಲಿ ಅಸಹಜ ಸಾವು ಪ್ರಕರಣದ ತನಿಖೆಗೆ 20 ಅಧಿಕಾರಿಗಳ ಎಸ್ಐಟಿ ರಚನೆ
- ಸೆ. 22ರಿಂದ 15 ದಿನ ರಾಜ್ಯದಲ್ಲಿ ಮತ್ತೆ ಜಾತಿ ಸಮೀಕ್ಷೆ
- ಬಿಕ್ಲು ಶಿವ ಕೊಲೆ ಪ್ರಕರಣ : 2ನೇ ಬಾರಿಗೆ ವಿಚಾರಣೆಗೆ ಹಾಜರಾದ ಭೈರತಿ ಬಸವರಾಜ್
- ಜು.25 ರಿಂದ 27ರವರೆಗೆ ಎಸ್ಕಾಂ ಆನ್ಲೈನ್ ಸೇವೆ ಅಲಭ್ಯ