ಬೆಂಗಳೂರು,ಜು.23-ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಶಾಸಕ ಭೈರತಿಬಸವರಾಜು ಅವರು ಇಂದು ಭಾರತಿನಗರ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.
ತನಿಖಾಧಿಕಾರಿಯಾಗಿರುವ ಎಸಿಪಿ ಅವರು ಇಂದು ಬೆಳಗ್ಗೆ ಬೈರತಿಬಸವರಾಜು ಅವರನ್ನು ವಿಚಾರಣೆಗೆ ಒಳಪಡಿಸಿ ಈ ಪ್ರಕರಣದ ಬಗ್ಗೆ ಕೆಲವು ಮಾಹಿತಿ ಗಳನ್ನು ಪಡೆದುಕೊಂಡರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶನಿವಾರ ಬೈರತಿಬಸವರಾಜು ಅವರು ಠಾಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಸತತ 3 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದರು.
ಇಂದು ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಿದ್ದರಿಂದ ಎರಡನೇ ಬಾರಿಗೆ ಹಾಜರಾದರು. ಈ ಪ್ರಕರಣದಲ್ಲಿ ಈಗಾಗಲೇ 11 ಮಂದಿಯನ್ನು ಬಂಧಿಸಿರುವ ಪೊಲೀಸರು, ಅವರುಗಳ ಪಾತ್ರದ ಬಗ್ಗೆ ಒಬ್ಬಬ್ಬರಿಂದಲೂ ನಿಖರವಾದ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.
- ಶ್ರೀರಾಮನ ಕುರಿತು ಮಾತನಾಡಿದ್ದಕ್ಕೆ ನನ್ನ ಅಧಿಕಾರ ಹೋಯ್ತು : ಭಾರತದ ಮೇಲೆ ಗೂಬೆಕೂರಲೆತ್ನಿಸಿದ ಓಲಿ
- ಆಮಿಷಕ್ಕೆ ಒಳಗಾಗಿ ರಷ್ಯಾ ಸೇನೆ ಸೇರದಿರಲು ವಿದೇಶಾಂಗ ಸಚಿವಾಲಯ ಎಚ್ಚರಿಕೆ
- ಹಸೆಮಣೆ ಏರಬೇಕಿದ್ದ ಜೋಡಿ ಅಪಘಾತದಲ್ಲಿ ದುರ್ಮರಣ
- ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ನಾಳೆ ಅಧಿಕಾರ ಸ್ವೀಕಾರ
- ಧರ್ಮಾಧರ ಕಲ್ಲುತೂರಾಟದಿಂದ ಉದ್ವಿಗ್ನಗೊಂಡಿದ್ದ ಮದ್ದೂರು ಯಥಾಸ್ಥಿತಿಗೆ