ನವದೆಹಲಿ,ಜು.25- ಎಐಸಿಸಿ ಆಶ್ರಯದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆದ ಹಿಂದುಳಿದ ವರ್ಗಗಳ ಭಾಗಿದಾರಿ ಸಮಾವೇಶದಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಕೇಂದ್ರಬಿಂದುವಾಗಿದ್ದು, ಬೆಂಗಳೂರು ಘೋಷಣೆಗಳನ್ನು ದೆಹಲಿಯ ಸಮಾವೇಶದಲ್ಲಿ ಘೋಷಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರಮುಖ ನಾಯಕರ ನ್ನೊಳಗೊಂಡ ರಾಷ್ಟ್ರಮಟ್ಟದ ಸಮಾವೇಶ ಬೆಂಗಳೂರಿನಲ್ಲಿ ನಡೆದಿತ್ತು.
ಅದರ ಮುಂದುವರೆದ ಭಾಗವಾಗಿ ದೆಹಲಿಯ ಕಾಲ್ಕಟೋರ ಸ್ಟೇಡಿಯಂ ನಲ್ಲಿ 2ನೇ ಹಂತದ ಬೃಹತ್ ಸಮಾವೇಶ ನಡೆದಿದೆ. ಸಮಾವೇಶದ ಸ್ಥಳಕ್ಕೆ ತಲುಪುವ ದಾರಿಯುದ್ದಕ್ಕೂ ಕಾಂಗ್ರೆಸ್ ನಾಯಕರುಗಳ ಫ್ಲೆಕ್್ಸ, ಬ್ಯಾನರ್ಗಳು ರಾರಾಜಿಸುತ್ತಿದ್ದವು.
ಎಲ್ಲಾ ಫ್ಲೆಕ್್ಸ, ಬ್ಯಾನರ್ಗಳಲ್ಲೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ಗಾಂಧಿ ಸಮಾನಂತರವಾಗಿ ಸಿದ್ದರಾಮಯ್ಯನವರ ಭಾವಚಿತ್ರಗಳು ಫ್ಲೆಕ್್ಸನಲ್ಲಿ ಕಂಡುಬಂದವು.ಈವರೆಗೆ ಕರ್ನಾಟಕದಲ್ಲಿ ಪ್ರಭಾವಿ ನಾಯಕರಾಗಿದ್ದ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಸಮಾವೇಶದ ಮೂಲಕ ರಾಷ್ಟ್ರಮಟ್ಟದಲ್ಲೂ ಮಿಂಚಲಾರಂಭಿಸಿದ್ದಾರೆ.
2013 ರಿಂದ 2018ರ ನಡುವೆ ಮುಖ್ಯಮಂತ್ರಿಯಾಗಿದ್ದಾಗ ಹಲವು ಭಾಗ್ಯಸರಣಿ ಯೋಜನೆಗಳ ಘೋಷಣೆ ಮೂಲಕ ಸಿದ್ದರಾಮಯ್ಯ ನವರು ಮನೆಮಾತಾಗಿದ್ದರು. 2023 ರ ಚುನಾವಣೆ ಬಳಿಕ ಮತ್ತೆ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ, ಪಂಚಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವ ಮೂಲಕ ಮತ್ತೊಮೆ ದೇಶದ ಗಮನ ಸೆಳೆದಿದ್ದಾರೆ.
ಭಾರತದಾದ್ಯಂತ ಕಾಂಗ್ರೆಸ್ ಆಡಳಿತದಲ್ಲಿರುವ ಕೆಲವೇ ಕೆಲವು ರಾಜ್ಯಗಳಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಪ್ರಭಾವಿ ನಾಯಕರಾಗಿದ್ದಾರೆ. ಹೀಗಾಗಿ ಅವರನ್ನು ಹಿಂದುಳಿದ ವರ್ಗಗಳ ಸಂಘಟನೆಗೆ ಕಾಂಗ್ರೆಸ್ ಪಕ್ಷ ರಾಷ್ಟ್ರಮಟ್ಟದಲ್ಲೇ ಅವರ ನೇತೃತ್ವದಲ್ಲೇ ಮುನ್ನಡೆಯಬೇಕಾಗಿದೆ. ಇಂದಿನ ದೆಹಲಿ ಸಮಾವೇಶದಲ್ಲಿ ಸಿದ್ದರಾಮಯ್ಯ ಪ್ರಮುಖ ಭಾಷಣಕಾರರಾಗಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಿದರೆ, ರಾಹುಲ್ಗಾಂಧಿ ಸಮಾರೋಪ ಭಾಷಣ ಮಾಡಿದರು.
ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ಮೇಲಾಗುತ್ತಿರುವ ದೌರ್ಜನ್ಯ ಹಾಗೂ ತಾರತಮ್ಯದ ಬಗ್ಗೆ ಸಮಾವೇಶದಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.ಈ ಮೊದಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಗೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಇದಕ್ಕೆ ಸಿದ್ದರಾಮಯ್ಯ ಪರೋಕ್ಷವಾಗಿ ತಮ ಅಸಹನೆಯನ್ನು ಹೊರಹಾಕಿದ್ದರು. ಹಿಂದುಳಿದ ವರ್ಗಗಳಲ್ಲಿ ಕಾಂಗ್ರೆಸ್ನ ಧೋರಣೆಗಳ ಬಗ್ಗೆ ನಕಾರಾತಕ ಸಂದೇಶ ರವಾನೆಯಾಗಿತ್ತು. ಈ ಕಾರಣಕ್ಕೆ ಪರಿಸ್ಥಿತಿಯನ್ನು ತಿಳಿಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರನ್ನು ಮುನ್ನಲೆಗೆ ತಂದಿದೆ.
ಈ ಮೂಲಕ ಕರ್ನಾಟಕದಲ್ಲೂ ತಪ್ಪಿಹೋಗಬಹುದಾದ ಹಿಂದುಳಿದ ವರ್ಗಗಳ ಮತಬ್ಯಾಂಕನ್ನು ಗಟ್ಟಿಗೊಳಿಸಿಕೊಳ್ಳುವುದು ಜೊತೆಗೆ ರಾಷ್ಟ್ರಮಟ್ಟದಲ್ಲಿ ಸಿದ್ದರಾಮಯ್ಯನವರ ಮೂಲಕವೇ ಹಿಂದುಳಿದ ವರ್ಗಗಳ ಮತಬ್ಯಾಂಕನ್ನು ಭದ್ರಗೊಳಿಸುವ ತಯಾರಿಯನ್ನು ಕಾಂಗ್ರೆಸ್ ಮಾಡಿಕೊಂಡಿದೆ.
- ಬೆಂಗಳೂರು : ಟೆಕ್ಕಿ ಮನೆಯಲ್ಲಿ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
- ಕುಡುಕ ಗಂಡನ ಕಾಟ ಮತ್ತು ಬಡತನಕ್ಕೆ ಬೇಸತ್ತು ಮೂವರು ಹೆಣ್ಣು ಮಕ್ಕಳಿಗೆ ವಿಷವಿಟ್ಟು ಕೊಂದ ತಾಯಿ
- SHOCKING : ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ, ಕೋಟ್ಯಂತರ ರೂ. ಬೆಲೆಯ ಮಾದಕ ವಸ್ತು ವಶ
- ಅಮೆರಿಕದಲ್ಲಿ 11 ಮಂದಿಗೆ ಇರಿದ ಯುವಕ, 6 ಜನರ ಸ್ಥಿತಿ ಗಂಭೀರ
- ರಾಜ್ಯದಲ್ಲಿ ಗೊಬ್ಬರ ಅಭಾವ : ನಾಳೆಯಿಂದ ಬಿಜೆಪಿ ಹೋರಾಟ