Sunday, July 27, 2025
Homeಜಿಲ್ಲಾ ಸುದ್ದಿಗಳು | District Newsಚಿಕ್ಕಮಗಳೂರು | Chikkamagaluruಚಿಕ್ಕಮಗಳೂರು : ಗುಪ್ತಚರ ಇಲಾಖೆ ಕಾನ್‌ಸ್ಟೇಬಲ್ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು : ಗುಪ್ತಚರ ಇಲಾಖೆ ಕಾನ್‌ಸ್ಟೇಬಲ್ ಆತ್ಮಹತ್ಯೆಗೆ ಶರಣು

Chikkamagaluru: Intelligence Department constable commits suicide

ಚಿಕ್ಕಮಗಳೂರು, ಜು.26- ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಕಾನ್‌ಸ್ಟೇಬಲ್‌ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.ಮಧು(28) ಮೃತಪಟ್ಟ ಕಾನ್‌ಸ್ಟೇಬಲ್‌.

ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಒಂದು ತಿಂಗಳ ಹಿಂದಷ್ಟೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು. ತಮ್ಮ ಮನೆಯಲ್ಲೇ ಅನಾರೋಗ್ಯದ ಸಮಸ್ಯೆ ಎಂದು ಚೀಟಿ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Latest News