ಚಿಕ್ಕಮಗಳೂರು, ಜು.26- ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ಬೀದಿ ನಾಯಿಗಳಿಗೆ ಅಲ್ಲಿನ ಬಿಬಿಎಂಪಿ ಬಿರಿಯಾನಿ ಭಾಗ್ಯ ನೀಡಿದರೆ ಕಾಫಿ ನಾಡಿನ ಕೇಂದ್ರ ಸ್ಥಳದ ನಗರಸಭೆ ಬೀದಿ ನಾಯಿಗಳಿಗೆ ಉಪವಾಸ ಭಾಗ್ಯ ನೀಡಿದೆ. ಬೀದಿನಾಯಿಗಳಿಗೆ ಆಹಾರ ಹಾಕುವುದು ಕಂಡು ಬಂದರೆ ಕಠಿಣಕ್ರಮ ಸಾರ್ವಜನಿಕರ ಮೇಲೆ ಕೈಗೊಳ್ಳಲಾಗುವುದು ಎಂದು ನಗರಸಭೆ ಎಚ್ಚರಿಸಿದೆ.
ಮನೆಯಲ್ಲಿ ಉಳಿದ ಆಹಾರ ಪದಾರ್ಥಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ನಾಯಿಗಳಿಗೆ ಹಾಕುತ್ತಿರುವುದು ಕಂಡು ಬಂದಿದ್ದು, ಈ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಂಬಂSಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ಬಿ.ಸಿ.ಬಸವರಾಜು ಅವರು ಎಚ್ಚರಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ನಗರ ವ್ಯಾಪ್ತಿಯಲ್ಲಿ ಬೀಡಾಡಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾಯಿ ಸಾಕಾಣಿಕೆದಾರರು ತಮ್ಮ ನಾಯಿಗಳನ್ನು ರಸ್ತೆಗೆ ಬಿಡದೆ ತಮ್ಮ ಮನೆ ಆವರಣದಲ್ಲೇ ಬೆಲ್ಟ್ ಅಥವಾ ಹಗ್ಗದಿಂದ ಕಟ್ಟಿಹಾಕಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ತಮ್ಮ ಮನೆಯಲ್ಲಿ ಉಳಿದ ಆಹಾರ ಪದಾರ್ಥಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ನಾಯಿಗಳಿಗೆ ಹಾಕುತ್ತಿರುವುದು ಕಂಡುಬಂದಿದ್ದು, ಇದು ನಗರ ವ್ಯಾಪ್ತಿಯಲ್ಲಿ ಬೀಡಾಡಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಕಾರಣವಾಗಿದೆ.
ಇದರಿಂದ ಸಾರ್ವಜನಿಕರಿಗೆ ಉಪದ್ರವದೊಂದಿಗೆ ನಾಯಿ ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಬಗ್ಗೆ ಸಹ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಈ ಕಚೇರಿಗೆ ಬರುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಇತ್ತೀಚೆಗೆ ಗೃಹ ಮಂಡಳಿ ಬಡಾವಣೆ ಮತ್ತು ಜಿಲ್ಲಾ ಪಂಚಾಯತಿ ಸುತ್ತಮುತ್ತ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು ಎಂಟು ಜನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ದಾಳಿ ನಡೆಸಿ ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬೀದಿ ನಾಯಿಗಳ ಉಪಟಳದಿಂದ ಇವುಗಳ ನಿಯಂತ್ರಣಕ್ಕೆ ನಗರಸಭೆ ಅಧಿಕಾರಿಗಳು ಮುಂದಾಗ ಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದರು. ಸಾರ್ವಜನಿಕರ ಒತ್ತಡ ಹಿನ್ನೆಲೆಯಲ್ಲಿ ನಗರಸಭೆ ಈ ಕ್ರಮ ಕೈಗೊಂಡಿದೆ.
- 13 ದಿನಗಳ ನಂತರ ಸಮಾಧಿಯಿಂದ ಮಹಿಳೆ ಶವ ಮೇಲೆತ್ತಿ ಮರಣೋತ್ತರ ಪರೀಕ್ಷೆ
- ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ (27-07-2025)
- ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ 15 “ಸುಪ್ರೀಂ” ಮಾರ್ಗಸೂಚಿ ಬಿಡುಗಡೆ
- ಚುನಾವಣಾ ಅಕ್ರಮ : ಕಾಂಗ್ರೆಸ್ ನಾಯಕರ ಆರೋಪಗಳಿಗೆ ಡಿ.ಕೆ.ಸುರೇಶ್ ಸಹಮತಿ
- ಎನ್ಡಿಎ ಸರ್ಕಾರದಿಂದ ಚುನಾವಣಾ ಆಯೋಗ ದುರುಪಯೋಗದ ವಿರುದ್ಧ ದೇಶಾದ್ಯಂತ ಅಭಿಯಾನ : ಸಿದ್ದರಾಮಯ್ಯ