Monday, July 28, 2025
Homeಜಿಲ್ಲಾ ಸುದ್ದಿಗಳು | District Newsಚಿಕ್ಕಮಗಳೂರು | Chikkamagaluruಚಿಕ್ಕಮಗಳೂರು : ಕಾಡಾನೆ ದಾಳಿ ಮತ್ತೊಬ್ಬ ರೈತ ಬಲಿ

ಚಿಕ್ಕಮಗಳೂರು : ಕಾಡಾನೆ ದಾಳಿ ಮತ್ತೊಬ್ಬ ರೈತ ಬಲಿ

Chikkamagaluru: Another farmer killed in wild elephant attack

ಚಿಕ್ಕಮಗಳೂರು,ಜು.28– ಕಾಡಾನೆ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಬಾಳೆಹೊನ್ನೂರು ಸಮೀಪದ ಅಂಡವಾಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುಬ್ರಾಯ ಗೌಡ (63) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ 7:30ರ ಸಮಯದಲ್ಲಿ ತಮ ತೋಟದ ಐಬೆಕ್ಸ ಬೇಲಿ ಆನ್‌ ಮಾಡಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಕಾಡಾನೆ ದಾಳಿಗೆ ಅನಿತ ಎಂಬ ಯುವತಿ ಮೃತಪಟ್ಟಿದ್ದರು. ಇದು ಮಾಸುವ ಮುನ್ನವೇ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಸ್ಥಳೀಯರು ತೀವ್ರ ಆತಂಕಗೊಂಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಾಡು ಆನೆಗಳನ್ನು ಸೆರೆ ಹಿಡಿದು ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಬಿಡಲಾಗಿತ್ತು. ಇವುಗಳು ಹೊರ ಬಂದು ಸ್ಥಳೀಯ ಜನರ ಮೇಲೆ ನಿರಂತರ ದಾಳಿ ಮಾಡುತ್ತಿದ್ದು ಅಮಾಯಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ದೂರಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು, ಕಾಡಾನೆ ಹಿಡಿಯಲು ಐದು ಸಾಕಾನೆಗಳನ್ನು ಕರೆತರಲಾಗುವುದು ಎಂದು ಸಮಜಾಯಿಷಿ ನೀಡಿದ್ದಾರೆ. ಒಟ್ಟಾರೆ ಕಾಡುಪ್ರಾಣಿಗಳು ಹಾಗೂ ಮಾನವ ಸಂಘರ್ಷದಿಂದಾಗಿ ರೈತರು ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಳ್ಳುತ್ತಿದ್ದು, ಸರ್ಕಾರ ಮಧ್ಯಪ್ರವೇಶಿಸಿ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಬೇಕಾಗಿದೆ.

RELATED ARTICLES

Latest News