ಬೆಂಗಳೂರು,ಜು.29- ಮನೆಯೊಂದರ ಮುಂಬಾಗಿಲಿನ ಬೀಗ ಒಡೆದು ಒಳನುಗ್ಗಿ ಹಣ, ಆಭರಣ ಕಳವು ಮಾಡಿ ಪರಾರಿಯಾಗಿದ್ದ, ಮೂವರು ಆರೋಪಿಗಳನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ 78.50 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ, ಆಭರಣ ವಶಪಡಿಸಿ ಕೊಂಡಿದ್ದಾರೆ. ಬೆಂಗಳೂರು ನಗರದ ನಿವಾಸಿಗಳಾದ ಮಿಥುನ್ (24), ರಘು (25),ಮತ್ತು ಜೈದೀಪ್ ಬಂಧಿತ ಆರೋಪಿಗಳು.
ಜಯನಗರ 5ನೇ ಬ್ಲಾಕ್‌ನ ನಿವಾಸಿಯೊಬ್ಬರು ಮಗನನ್ನು ಏರ್‌ಪೋರ್ಟ್‌ಗೆ ಬಿಟ್ಟು ಬರಲು ಹೋಗಿದ್ದಾಗ ಇತ್ತ ಕಳ್ಳರು ಇವರ ಮನೆಯ ಬೀಗ ಒಡೆದು ಒಳನುಗ್ಗಿ 1ಕೋಟಿ ರೂ. ಬೆಲೆ ಬಾಳುವ 1.5ಕೆಜಿ ಚಿನ್ನಾಭರಣ, ಬೆಳ್ಳಿ ವಸ್ತುಗಳು, 3 ಲಕ್ಷ ರೂ. ಬೆಲೆಯ ರೊಲೆಕ್‌್ಸ ವಾಚ್ ಹಾಗೂ 50 ಸಾವಿರ ಹಣ ಕಳವು ಮಾಡಿಕೊಂಡು ಪರಾರಿಯಾಗಿದ್ದರು.
ಏರ್‌ಪೋರ್ಟ್‌ನಿಂದ ವಾಪಸ್ ಆದಾಗ ಮನೆಯಲ್ಲಿ ಕಳ್ಳತನವಾಗಿರುವುದು ಕಂಡು ಬಂದಿದೆ. ತಕ್ಷಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿಗಳನ್ನು ಕಲೆಹಾಕಿ ತಲಘಟ್ಟಪುರದ ತುರಹಳ್ಳಿ ಫಾರೆಸ್ಟ್‌ನ ಖಾಲಿ ಜಾಗದಲ್ಲಿ ಮೂವರನ್ನು ಚಿನ್ನಾಭರಣಗಳ ಸಮೇತ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಮನೆಗಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ.
ಆರೋಪಿಗಳಿಂದ 1 ಕೆಜಿ 35 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಸುದೀರ್ಘವಾಗಿ ವಿಚಾರಣೆಗೆ ಒಳಪಡಿಸಿ 1 ದ್ವಿಚಕ್ರವಾಹನ ಹಾಗೂ ಸ್ನೇಹಿತನಿಗೆ ನೀಡಿದ್ದ 50 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳುವಲ್ಲಿ ಇನ್ಸ್ ಪೆಕ್ಟರ್ ದೀಪಕ್ ಹಾಗೂ ಸಿಬ್ಬಂದಿ ತಂಡ ಯಶಸ್ವಿಯಾಗಿದೆ.
- 35 ವರ್ಷಗಳ ಸುದೀರ್ಘ ಸೇವೆ ತೃಪ್ತಿ ತಂದಿದೆ : ಡಿಜಿಪಿ ಮಾಲಿನಿ ಕೃಷ್ಣಮೂರ್ತಿ
- 2035ರ ವೇಳೆಗೆ 20 ಶತಕೋಟಿ ಡಾಲರ್ ಕ್ವಾಂಟಮ್ ಆರ್ಥಿಕ ರಾಜ್ಯವಾಗಿಸುವ ಗುರಿ : ಸಚಿವ ಭೋಸರಾಜು
- ಶ್ರಾವಣಕ್ಕೆ ದುಬಾರಿಯಾದ ತೆಂಗಿನಕಾಯಿ
- ಬೆಂಗಳೂರಲ್ಲಿ ಪೊಲೀಸರಿಂದ ವಾಹನ ಟೋಯಿಂಗ್ : ಗೃಹ ಸಚಿವ ಪರಮೇಶ್ವರ್
- ಬೆಂಗಳೂರು : ಗಂಡನ ಮೇಲಿನ ಕೋಪಕ್ಕೆ ವಿಷವುಣಿಸಿ ಮಗುವನ್ನು ಕೊಂದ ತಾಯಿ