Friday, August 1, 2025
Homeರಾಷ್ಟ್ರೀಯ | Nationalಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆ ಸ್ಥಗಿತ

ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆ ಸ್ಥಗಿತ

Amarnath Yatra suspended due to heavy rains

ಶ್ರೀನಗರ,ಜು. 30- ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಪಹಲ್ಗಾಮ್‌ ಮತ್ತು ಬಾಲ್ಟಾಲ್‌ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಇಂದು ಸ್ಥಗಿತಗೊಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಜಾನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಬಾಲ್ಟಾಲ್‌ ಮತ್ತು ನುನ್ವಾನ್‌/ಚಂದನ್ವಾರಿ ಮೂಲ ಶಿಬಿರಗಳಿಂದ ಯಾತ್ರೆಗೆ ಅವಕಾಶ ನೀಡಲಾಗಿಲ್ಲ ಎಂದು ಕಾಶ್ಮೀರದ ವಿಭಾಗೀಯ ಆಯುಕ್ತ ವಿಜಯ್‌ ಕುಮಾರ್‌ ಬಿಧುರಿ ತಿಳಿಸಿದ್ದಾರೆ.

ಇಲ್ಲಿಯವರೆಗೆ, 3.93 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಗುಹಾ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ ಎಂದು ಹೇಳಿದರು.ಇನ್ನು ಗುರುವಾರ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು.ಯಾತ್ರೆ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ, ಮೂಲ ಶಿಬಿರಗಳಿಂದ ಯಾತ್ರಾರ್ಥಿಗಳ ಸಂಚಾರಕ್ಕೆ ತೊಂದರೆಯಾಗಿದೆ.

ಆದ್ದರಿಂದ, ಜುಲೈ 31, 2025 ರಂದು ಭಗವತಿ ನಗರ ಜಮ್ಮುವಿನಿಂದ ಬಾಲ್ಟಾಲ್‌ ಮತ್ತು ನುನ್ವಾನ್‌ ಮೂಲ ಶಿಬಿರಗಳ ಕಡೆಗೆ ಯಾವುದೇ ಬೆಂಗಾವಲು ಸಂಚಾರವನ್ನು ಅನುಮತಿಸಲಾಗುವುದಿಲ್ಲ ಎಂದು ನಿರ್ಧರಿಸಲಾಗಿದೆ ಎಂದು ಡಿಐಪಿಆರ್‌ ತಿಳಿಸಿದೆ.

RELATED ARTICLES

Latest News