ಬೆಂಗಳೂರು,ಆ.1- ಸುಳ್ಳು ಸುದ್ದಿ ಹಾಗೂ ದ್ವೇಷಪೂರಿತ ಪ್ರಚಾರಗಳ ವಿರುದ್ಧ ಕಠಿಣ ಕಾನೂನು ರೂಪಿಸುವ ಸಲುವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ವಿಧಾನಸೌಧದ ಗೃಹ ಸಚಿವರ ಕಚೇರಿಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜ ನೀಶ್, ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಮ್, ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣವ್ ಮೊಹಾಂತಿ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.
ದೇಶಾದ್ಯಂತ ಭಾರಿ ತಲೆನೋವಾಗಿರುವ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವುದು, ಆನ್‌ಲೈನ್ ಗ್ಯಾಂಬ್ಲಿಂಗ್, ದ್ವೇಷ ಭಾಷಣ ಹಾಗೂ ಭಾವನಾತಕ ಪ್ರಚೋದನೆಗಳ ವಿರುದ್ಧ ಕಠಿಣ ಕಾನೂನುಗಳನ್ನು ತರಲು ರಾಜ್ಯಸರ್ಕಾರ ಮುಂದಾಗಿದೆ.
ಈ ಮೊದಲು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಶಾಸಕರು ಆನ್‌ಲೈನ್ ಗೇಮ್‌ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅನಂತರ ಕೆಲವು ಘಟನೆಗಳಲ್ಲಿ ಆನ್‌ಲೈನ್ ಗೇಮ್ ಚಟಕ್ಕೆ ಒಳಗಾದ ಕೆಲವರು ಆತಹತ್ಯೆ ಮಾಡಿಕೊಂಡಿದ್ದ ಪ್ರಕರಣಗಳು ವರದಿಯಾಗಿದ್ದವು.
ಮುಂದಿನ ಅಧಿವೇಶನದ ಒಳಗೆ ಕಠಿಣ ಕಾನೂನುಗಳನ್ನು ರೂಪಿಸಲು ಸರ್ಕಾರ ಮುಂದಾಗಿದೆ. ಅದೇ ರೀತಿ ಸುಳ್ಳು ಸುದ್ದಿಗಳು ವದಂತಿಗಳು ಸಾರ್ವಜನಿಕ ವಲಯದಲ್ಲಿ ಶಾಂತಿ ಭಂಗಕ್ಕೆ ಅವಕಾಶ ಮಾಡಿ ಕೊಡುತ್ತಿವೆ. ಅವುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲೂ ಸಭೆಯಲ್ಲಿ ಚರ್ಚೆಗಳಾಗಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.ಸಭೆಯ ಅಧ್ಯಕ್ಷತೆ ವಹಿಸಿದ ಸಚಿವ ಪರಮೇಶ್ವೆರ್ ಗೃಹ ಇಲಾಖೆಯಿಂದ ರೂಪಿಸಬೇಕಾದ ನಿಯಮಾವಳಿಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
- ನ್ಯೂಜಿಲ್ಯಾಂಡ್ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್
- ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡ ಚೀನಿ ಸಿಬ್ಬಂದಿ
- ಮಹಾರಾಷ್ಟ್ರ : ಥಾಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2.14 ಕೋಟಿ ಮೌಲ್ಯದ ಡ್ರಗ್ಸ್ ವಶ, ನಾಲ್ವರ ಬಂಧನ
- ಪ್ರಧಾನಿ ಮೋದಿ ಬೆಂಬಲದಿಂದಾಗಿ ಕ್ರೀಡೆಯಲ್ಲಿ ಭಾರತಕ್ಕೆ ಜಾಗತಿಕ ಮನ್ನಣೆ
- ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..!
