ಬೆಂಗಳೂರು, ಜು.2- ಮನೆಗೆಲಸದಾಕೆಯ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.ವಿಶೇಷನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಗಜಾನನ ಭಟ್ ಅವರು, ಪ್ರಜ್ವಲ್‌ಗೆ ಹತ್ತು ಲಕ್ಷ ರೂ. ದಂಡವನ್ನೂ ವಿಧಿಸಿದ್ದಾರೆ.
ಕೆ.ಆರ್. ನಗರದ ಮಹಿಳೆ ಮೇಲಿನ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರು ದೋಷಿ ಎಂದು ನಿನ್ನೆ ತೀರ್ಪು ನೀಡಿದ್ದರು. ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಿದ್ದಾರೆ.ಇದುವರೆಗಿನ ನ್ಯಾಯಾಂಗ ಬಂಧನದ ಸೆರೆವಾಸದ ಅವಧಿಯು ವಿಧಿಸಿರುವ ಶಿಕ್ಷೆಯಲ್ಲಿ ಕಡಿತವಾಗುವುದಿಲ್ಲ.
ಸೆರೆವಾಸದ ಶಿಕ್ಷೆಯು ಇಂದಿನಿಂದ ಆರಂಭಗೊಳ್ಳಲಿದೆ. ಸಂತ್ರಸ್ತೆಗೂ ಪರಿಹಾರ ನೀಡಬೇಕು ಎಂದು ತೀರ್ಪು ನೀಡಿದ್ದಾರೆ.ನ್ಯಾಯಾಲಯದಲ್ಲಿ ಕಣ್ಣೀರು ಸುರಿಸಿ ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಪ್ರಜ್ವಲ್ ರೇವಣ್ಣ ಮನವಿ ಮಾಡಿಕೊಂಡಿದ್ದರು.
ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಕೇಸ್ನಲ್ಲಿ ಪ್ರಜ್ವಲ್ ರೇವಣ್ಣಗೆ IPC 376(2)K ಅಡಿ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನ ನ್ಯಾ.ಸಂತೋಷ್ ಗಜಾನನ ಭಟ್ ಅವರು ಆದೇಶ ಹೊರಡಿಸಿದ್ದಾರೆ. ಹಾಗೆಯೇ ಸಂತ್ರಸ್ತೆ ಮಹಿಳೆಗೆ 11 ಲಕ್ಷ ಪರಿಹಾರ ಅಪರಾಧಿ ನೀಡಬೇಕೆಂದು ಕೋರ್ಟ್ ಘೋಷಿಸಿದೆ.
ಇಂದು ಸರ್ಕಾರದ ಪರ ವಕೀಲರಾದ ಬಿ.ಎನ್ ಜಗದೀಶ್, ಅಶೋಕ್ ನಾಯಕ್ ಪ್ರಬಲ ವಾದ ಮಂಡನೆ ಮಾಡಿದ್ದು, ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಪರ ವಕೀಲೆ ನಳಿನಿ ಮಾಯಾಗೌಡ ವಾದ ಮಂಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇದೀಗ ಅಂತಿಮವಾಗಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.
- ಮತಗಳ್ಳತನ ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಳ್ಳದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಜಾ: ಡಿಕೆಶಿ ಎಚ್ಚರಿಕೆ
- ಚಿಲ್ಲರೆ ಕೇಳುವ ಹಾಗೂ ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಎರಡು ಕಡೆ ದರೋಡೆ
- ಪೊಲೀಸರಿಗೆ ಸವಾಲಾಗಿದ್ದ ನಟೋರಿಯಸ್ ಕಳ್ಳನ ರೋಚಕ ಕಥೆ
- ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಿದೇಶಿ ಡ್ರಗ್ಸ್ ಜಾಲ..!
- ಮತ್ತಷ್ಟು ತೀವ್ರಗೊಂಡ ರೈತರ ಪ್ರತಿಭಟನೆ, 8ನೇ ದಿನಕ್ಕೆ ಕಾಲಿಟ್ಟ ಕಿಚ್ಚು
