ಬೆಂಗಳೂರು,ಆ.4-ತತ್‌ಕ್ಷಣವೇ ವೇತನ ಪರಿಷ್ಕರಣೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ನಾಳೆಯಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿರುವ ಬೆನ್ನಲ್ಲೇ ನೌಕರರ ರಜೆಯನ್ನು ರದ್ದುಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಒಂದು ವೇಳೆ ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಯಾವುದೇ ನೌಕರ ಪ್ರತಿಭಟನೆ ನಡೆಸುವುದು ಇಲ್ಲವೇ ಮುಷ್ಕರದಲ್ಲಿ ಪಾಲ್ಗೊಂಡರೆ ಅಂಥವರ ವಿರುದ್ದ ಶಿಸ್ತು ಕ್ರಮ ಜರುಗಿಸುವುದಾಗಿಯೂ ಎಚ್ಚರಿಕೆ ನೀಡಿದೆ.
ಈ ಕುರಿತು ಸಾರಿಗೆ ಇಲಾಖೆ ವಿಶೇಷ ಸುತ್ತೋಲೆ ಹೊರಡಿಸಿದ್ದು, ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಸಾರಿಗೆ ನೌಕರರ ರಜೆಯನ್ನು ರದ್ದುಪಡಿಸಲಾಗಿದೆ. ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಉಳಿದ ಯಾವುದೇ ರೀತಿ ರಜೆಗಳನ್ನು ಸಿಬ್ಬಂದಿಗೆ ಮಂಜೂರು ಮಾಡದಂತೆ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರಾಗುವ ನೌಕರರ ವೇತನವನ್ನೂ ಕಡಿತಗೊಳಿಸುವುದಾಗಿ ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.
ಸಾರಿಗೆ ಇಲಾಖೆ ಸುತ್ತೋಲೆಯಲ್ಲಿ ಏನಿದೆ?
*ಆಗಸ್ಟ್ 4ರಿಂದಲೇ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಅನುಸೂಚಿಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು.
*ಆ.4ರಿಂದಲೇ ಜಾರಿಗೆ ಬರುವಂತೆ ಅನಿವಾರ್ಯ ಸಂದರ್ಭ ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದು.
*ಆ.4ರಿಂದ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ ಕೆಲಸ ಮಾಡದಿದ್ದಾಗ ವೇತನವಿಲ್ಲ? ಎಂಬ ತತ್ವದ ಪ್ರಕಾರ ಕ್ರಮ ಕೈಗೊಳ್ಳುವುದು.
*ಈ ಸೂಚನೆಗಳು ವಾರದ ರಜೆ ಮತ್ತು ಧೀರ್ಘಾವಧಿ ರಜೆಯಲ್ಲಿರುವ ನೌಕರರಿಗೆ ಅನ್ವಯಿಸುವುದಿಲ್ಲ. ಆದರೆ ಅನಿವಾರ್ಯ ಸಂದರ್ಭದಲ್ಲಿ ಅವಶ್ಯವಿದ್ದಲ್ಲಿ ನೌಕರರ ವಾರದ ರಜೆಯನ್ನೂ ರದ್ದುಗೊಳಿಸಿ ಕರ್ತವ್ಯದ ಮೇಲೆ ನಿಯೋಜಿಸುವುದು.
*ಇಂದು (ಆ.4) ಮತ್ತು ನಂತರದ ಮುಷ್ಕರದ ದಿನಗಳಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರ ಪಟ್ಟಿಯಲ್ಲಿ ದಿನವಹಿ/ ಘಟಕವಾರು/ ವರ್ಗಾವಾರು ಸಿದ್ಧಪಡಿಸಿ, ಕೆಲಸ ಮಾಡದಿದ್ದ ದಿನಗಳ ವೇತನ ಕಡಿತಗೊಳಿಸುವುದು. ಅಲ್ಲದೇ, ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ನಾಲ್ಕು ನಿಗಮಗಳಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.
- 80ರ ವೃದ್ಧನಿಗೆ ಪ್ರೀತಿ ಹೆಸರಲ್ಲಿ ನಾಲ್ವರು ಮಹಿಳೆಯರಿಂದ 9 ಕೋಟಿ ವಂಚನೆ
- ಸವಿತಕ್ಕ ಪುತ್ರನ ಆತಹತ್ಯೆಗೆ “ಡೆತ್ನೋಟ್” ವೆಬ್ಸೀರಿಸ್ ಕಾರಣವಂತೆ..?
- ಎಲ್ಲಾ ರಾಜ್ಯಗಳಲ್ಲೂ ಅನರ್ಹ ಮತದಾರರಿಗೆ ಕೋಕ್
- ಆನ್ಲೈನ್ ಗೇಮ್ಗಾಗಿ ಹಣಕ್ಕೆ ಪೀಡಿಸುತ್ತಿದ್ದ ತಂಗಿ ಮಗನನ್ನೇ ಕೊಂದ ಮಾವ
- ಮತಗಳ್ಳತನದ ವಿರುದ್ಧ ಬೆಂಗಳೂರಲ್ಲಿ ರಾಹುಲ್ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ