ಬೆಂಗಳೂರು, ಆ.4- ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಸಲುವಾಗಿಯೇ ರಾಜ್ಯಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚಿಸಿದ್ದ ನ್ಯಾಯಾಂಗ ಆಯೋಗ ಸರ್ಕಾರಕ್ಕೆ ಇಂದು ತನ್ನ ವರದಿ ಸಲ್ಲಿಸಲಿದೆ. ಅದನ್ನು ಆಧರಿಸಿ ಒಳಮೀಸಲಾತಿ ಜಾರಿಗೆ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 90 ದಿನದ ಒಳಗಾಗಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ಯಾರು ಹೇಳಿಕೆ ನೀಡಿದ್ದರೋ ನನಗೆ ಗೊತ್ತಿಲ್ಲ. ಆದರೆ ಸರ್ಕಾರ ತನ್ನ ಮಾತಿನಂತೆ ನಡೆದುಕೊಳ್ಳುತ್ತದೆ ಎಂದರು.
ಒಳಮೀಸಲಾತಿ ಇತ್ಯರ್ಥಗೊಳ್ಳುವವರಿಗೂ ನೇಮಕಾತಿಗಳನ್ನು ಸ್ಥಗಿತಗೊಳಿಸುವಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಿತ್ತು. ಈಗ ವರದಿ ಸಲ್ಲಿಕೆಯಾದ ಬಳಿಕ ಶಿಫಾರಸುಗಳನ್ನು ಆಧರಿಸಿ, ನೇಮಕಾತಿ ಹಾಗೂ ಮುಂಬಡ್ತಿ ಪ್ರಕ್ರಿಯೆಗಳನ್ನು ಮುಂದುವರೆಸಲಾಗುವುದು ಎಂದು ಹೇಳಿದರು.
ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಲು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ತೀವ್ರ ಸ್ವರೂಪದ ಕಾರ್ಯಾಚರಣೆ ನಡೆಸಲಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ಕಾರ್ಯಪಡೆಗಳೇ ಕೆಲಸ ಮಾಡುತ್ತಿದೆ. ಜಿಲ್ಲಾ ಪೊಲೀಸ್ ಮುಖ್ಯಅಧಿಕಾರಿಗಳಿಗೂ ಈ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ. ಲಭ್ಯವಿರುವ ಮಾಹಿತಿಗಳ ಆಧಾರದ ಮೇಲೆ ವಿಶೇಷ ತಂಡ ತ್ವರಿತ ಕಾರ್ಯಾಚರಣೆ ನಡೆಸುತ್ತಿವೆ ಎಂದು ಹೇಳಿದರು.
ನಕ್ಸಲ್ ನಿಗ್ರಹ ಪಡೆಗಳನ್ನು ರದ್ದು ಪಡಿಸಲಾಗಿದೆ. ಆದರೆ ಅಲ್ಲಿ ಕೆಲಸ ಮಾಡುವಾಗ ತರಬೇತಿ ಪಡೆದಿರುವ ಸಿಬ್ಬಂದಿಗಳನ್ನು ಮಂಗಳೂರು ಹಾಗೂ ಇತರೆ ಭಾಗಗಳಲ್ಲಿನ ಕೋಮು ಚಟುವಟಿಕೆಗಳನ್ನು ಹತ್ತಿಕ್ಕಲು ರಚಿಸಲಾಗಿರುವ ವಿಶೇಷ ದಳಕ್ಕೆ ಬಳಕೆ ಮಾಡಲಾಗುವುದು ಎಂದರು.
ಧರ್ಮಸ್ಥಳ ಭಾಗದಲ್ಲಿ ವಿಶೇಷ ತನಿಖೆ ನಡೆಸುತ್ತಿರುವ ಪ್ರಣವ್ ಮೊಹಾಂತಿ ಅವರ ನೇತೃತ್ವದ ಎಸ್‌ಐಟಿ ಅಧಿಕಾರಗಳು ನನಗೆ ವಿಶೇಷ ಮಾಹಿತಿಯನ್ನು ನೀಡಿಲ್ಲ. ತನಿಖೆಯ ಬಳಿಕ ಅವರು ವರದಿ ನೀಡಲಿದ್ದಾರೆ. ಅನಂತರ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಸಾರಿಗೆ ಇಲಾಖೆ ನೌಕರರ ಮುಷ್ಕರ ಸೇರಿದಂತೆ ಯಾವುದೇ ಸಂದರ್ಭಗಳಲ್ಲೂ ನಿಭಾಯಿಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕಿದೆ. ರಾಹುಲ್‌ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಾಳೆಯೇ ಪ್ರತಿಭಟನೆ ನಡೆಯುತ್ತಿದೆ. ಅದಕ್ಕೆ ಅಗತ್ಯವಾದ ಭದ್ರತೆಯನ್ನು ಒದಗಿಸಲಾಗಿದೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಈಗಾಗಳೇ ಹಲವು ಸುತ್ತಿನ ಸಮಾಲೋಚನೆಗಳನ್ನು ನಡೆಸಿದ್ದಾರೆ ಅಗತ್ಯ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ ಎಂದು ಹೇಳಿದರು.
- ಹೈಕೋರ್ಟ್ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದ ಸಾರಿಗೆ ನೌಕರರು
- ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ಗೆ ಮತ್ತೆ 40 ದಿನಗಳ ಪೆರೋಲ್
- “ಸಿದ್ದರಾಮಯ್ಯನವರೇ, ಈ ನವರಂಗಿ ಆಟ ನಿಲ್ಲಿಸಿ, ರಾಜೀನಾಮೆ ನೀಡಿ ಕರ್ನಾಟಕವನ್ನು ಉಳಿಸಿ” : ಆರ್.ಅಶೋಕ್
- ರಾಹುಲ್ ಗಾಂಧಿಗೆ ಛೀಮಾರಿ ಹಾಕಿದ ಸುಪ್ರೀಂ, ಇಂಡಿ ನಾಯಕರ ಆಕ್ಷೇಪ
- ಉತ್ತರ ಕಾಶಿಯಲ್ಲಿ ಭೀಕರ ಮೇಘ ಸ್ಫೋಟ : ಹಲವರ ಸಾವು, 60ಕ್ಕೂ ಹೆಚ್ಚು ಜನ ನಾಪತ್ತೆ