ಬೆಂಗಳೂರು, ಆ.5- ಮುಂದಿನ ನಾಲ್ಕು ವರ್ಷಗಳ ಒಳಗಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಬರ್‌ಬನ್ ರೈಲು ಸಂಪರ್ಕ ಕಲ್ಪಿಸುವ ಮೂಲಕ ನಗರದ ಕೇಂದ್ರ ಭಾಗದಂತೆಯೇ ಇತರ ಪ್ರದೇಶಗಳನ್ನು ಸಮಗ್ರ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೇವನಹಳ್ಳಿಯಲ್ಲಿ ಲ್ಯಾಬ್ಸ್ ಇಂಡಿಯಾದ 41 ಎಕರೆ ವಿಸ್ತೀರ್ಣದ ಹೊಸ ಇನ್ನೋವೇಶನ್ ಪಾರ್ಕ್ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನ ಸಮತೋಲಿತ ಅಭಿವೃದ್ಧಿಗೆ ಹಾಗೂ ಹೊರ ವಲಯಗಳನ್ನು ಅಭಿವೃದ್ಧಿಗೆ ಆಧ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ವಿಮಾನನಿಲ್ದಾಣಕ್ಕೆ ಮೆಟ್ರೋ ರೈಲು ಸಂಪರ್ಕವನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, 2029ರ ವೇಳೆಗೆ ಸಬರ್‌ಬನ್ ರೈಲು ಸಂಪರ್ಕವನ್ನು ಒದಗಿಸಲಾಗುತ್ತಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ಕ್ರಮಗಳು ಕೇವಲ ಬೆಂಗಳೂರಿಗೆ ಸೀಮಿತವಾಗಿವೆ. ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲೂ ಜಾಗತಿಕ ತಂತ್ರಜ್ಞಾನ ಕೇಂದ್ರಗಳು ಹಾಗೂ ಸಂಶೋಧನಾತಕ ಸಂಸ್ಥೆಗಳ ಅಭಿವೃದ್ಧಿಗೆ ಪೂರ್ವಕವಾಗಿವೆೆ. ವಿಶ್ವ ಬ್ಯಾಂಕಿನ 2500 ಕೋಟಿ ರೂ.ಗಳ ಬೆಂಬಲದೊಂದಿಗೆ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಜೇಷ್ಠತಾ ಕೇಂದ್ರಗಳ ಅಭಿವೃದ್ಧಿ, ಸಂಶೋಧನೆ ಮತ್ತು ಅಭಿವೃದ್ಧಿ ಸಾಮಾರ್ಥ್ಯ ವೃದ್ಧಿ ಹಾಗೂ ಕೌಶಲ್ಯ ಸುಧಾರಣೆಗೆ ಆಧ್ಯತೆ ನೀಡಲಾಗಿದೆ. ಭವಿಷ್ಯದಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ ಕೈಜೋಡಿಸಿ ಕೆಲಸ ಮಾಡುವ ಮಾನವ ಸಂಪನೂಲಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದಿದ್ದಾರೆ.
ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಬೆಂಗಳೂರು ನಗರ ಎಂಬುಂದಕ್ಕಿಂತ ಹೆಚ್ಚಿನದಾಗಿದೆ. ಇದು ಒಂದು ಕಲ್ಪನೆ. ಪರಿಸರ ವ್ಯವಸ್ಥೆ, ನಾವೀನ್ಯತೆಯ ಚೈತನ್ಯ, ಯುವ ತಂತ್ರಜ್ಞರ ಕನಸುಗಳು, ಜಾಗತಿಕ ಉದ್ಯಮಗಳ ದೂರದೃಷ್ಟಿ, ಸಾರ್ವಜನಿಕ ನೀತಿಯ ಸ್ಥಿತಿಸ್ಥಾಪಕತ್ವ ಹಾಗೂ ಭವಿಷ್ಯದ ನಿರ್ಮಾಣ ಒಟ್ಟಿಗೆ ಸೇರುವ ಸಂಗಮವಾಗಿದೆ ಎಂದಿದ್ದಾರೆ.
ಬೆೆಂಗಳೂರು ಸಾಫ್‌್ಟವೇರ್ ಮಾತ್ರವಲ್ಲದೆ ಕ್ವಾಂಟಮ್ ಕಂಪ್ಯೂಟಿಂಗ್, ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆಯಂತಹ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ಕರ್ನಾಟಕದ ಸಾಮರ್ಥ್ಯ, ವಿಶ್ವಾಸಾರ್ಹತೆ ಮತ್ತು ಶ್ರೇಷ್ಠತೆಯ ಬದ್ಧತೆಯಲ್ಲಿ ಜಾಗತಿಕ ಉದ್ಯಮದ ಆಳವಾದ ನಂಬಿಕೆ ಪ್ರತಿನಿಧಿಸುತ್ತದೆ ಎಂದಿದ್ದಾರೆ.
ಭಾರತದ ಆರ್ಥಿಕತೆಗೆ ಕರ್ನಾಟಕ ಶೇ.8ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತಿದೆ ಮತ್ತು ರಫ್ತಿನಲ್ಲಿ ಶೇ.35 ಪಾಲನ್ನು ಹೊಂದಿದೆ. 18 ಸಾವಿರಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, ಶೇ. 40 ಯೂನಿಕಾರ್ನ್‌ಗಳಿಗೆ ಇಲ್ಲಿ ನೆಲೆಯಾಗಿವೆ ಎಂದು ಹೇಳಿದರು. ಶುದ್ಧ ಇಂಧನ, ಸುಸ್ಥಿರ ಚಲನಶೀಲತೆ ಮತ್ತು ಪರಿಸರ ಪ್ರಜ್ಞೆಯ ಬೆಳವಣಿಗೆಯಲ್ಲಿ ಮುನ್ನಡೆಯುತ್ತಿದ್ದೇವೆ. ಹೂಡಿಕೆಗಳು ಆರ್ಥಿಕ ಪ್ರಗತಿ ಮತ್ತು ಪರಿಸರ ಜವಾಬ್ದಾರಿಗೆ ಬೆಂಬಲವಾಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಡಿಜಿಟಲ್ ಆಡಳಿತ, ಸಾರ್ಟ್ ಸಿಟಿಗಳು, ಕೌಶಲ್ಯ ಮತ್ತು ಸುಸ್ಥಿರತೆಯಂತಹ ಕ್ಷೇತ್ರಗಳಲ್ಲಿ ಸ್ಯಾಪ್‌ನ ಪಾಲುದಾರಿಕೆ ಮತ್ತಷ್ಟು ಉತ್ತೇಜನಕಾರಿಯಾಗಿದೆ ಎಂದಿರುವ ಅವರು, ಲ್ಯಾಬ್‌್ಸ ಇಂಡಿಯಾ ಮತ್ತು ಜಾಗತಿಕವಾಗಿ ಪ್ರಸಿದ್ಧವಾದ ಮ್ಯೂನಿಚ್ ತಾಂತ್ರಿಕ ವಿಶ್ವವಿದ್ಯಾಲಯದ ನಡುವಿನ ಸಹಯೋಗವು ಮತ್ತೊಂದು ಹೆಗ್ಗುರುತಾಗಿದೆ ಎಂದು ಹೇಳಿದರು.ಸಾರ್ವಜನಿಕ-ಖಾಸಗಿ-ಶೈಕ್ಷಣಿಕ ಸಹಯೋಗಗಳು ಭವಿಷ್ಯಕ್ಕೆ ಸಿದ್ಧವಾಗಿರುವ ಕರ್ನಾಟಕವನ್ನು ರೂಪಿಸುವಲ್ಲಿ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ಪ್ರದರ್ಶಿಸುತ್ತವೆ ಎಂದರು.
ಕಾರ್ಯಕ್ರಮಗಳಲ್ಲಿ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ, ಕಿಯಾನಿಕ್‌್ಸ ಅಧ್ಯಕ್ಷ ಶರತ್ ಬಚ್ಚೇಗೌಡ, ಜರ್ಮನಿಯ ರಾಯಭಾರಿ ಡಾ. ಪಿಲಿಪ್ ಅಕೇರ್ಮನ್, ಸ್ಯಾಪ್ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
- ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ವಾಯುಪ್ರದೇಶ ನಿಷೇಧಿಸಿ ಭಾರಿ ನಷ್ಟ ಅನುಭವಿಸಿದ ಪಾಕ್
- ಮಂಗಳವಾರ ಪಾಕ್ ಮಾಜಿ ಪ್ರಧಾನಿ ಇಮ್ರಾನ್ಖಾನ್ ಜಾಮೀನು ಅರ್ಜಿ ವಿಚಾರಣೆ
- ಅಂತರರಾಷ್ಟ್ರೀಯ ಐಎಂಇಸಿ ಯೋಜನೆಯಲ್ಲಿ ಭಾರತದ ಪಾತ್ರ ನಿರ್ಣಾಯಕ ; ಇಟಲಿ
- ಉತ್ತರಪ್ರದೇಶ : ಟ್ರಾನ್ಸ್ಜೆಂಡರ್ ಮಹಿಳೆ ಮತ್ತು ಸಹೋದರನ ಬರ್ಬರ ಕೊಲೆ
- ಮತಗಳ್ಳತನದ ವೆಬ್ಪೇಜ್ ಆರಂಭಿಸಿದ ಕಾಂಗ್ರೆಸ್