ಉತ್ತರಕಾಂಡ,ಆ.5- ಉತ್ತರ ಕಾಶಿಯಲ್ಲಿ ಭೀಕರ ಮೇಘ ಸ್ಫೋಟ ಸಂಭವಿಸಿ ಅನೇಕ ಮನೆಗಳು ನಾಶವಾಗಿ, 60ಕ್ಕೂ ಹೆಚ್ಚು ಜನ ನಾಪತ್ತೆಯಾಗಿ, ಹಲವರು ಅವಶೇಷಗಳಡಿ ಸಿಲುಕಿರುವ ಘಟನೆ ನಡೆದಿದೆ.
ಇಲ್ಲಿನ ಧರಲ್ಲಿ ಗ್ರಾಮದಲ್ಲಿ ಮೇಘ ಸ್ಫೋಟದಿಂದ ಹಠಾತ್ ಪ್ರವಾಹ ಉಂಟಾಗಿ ಅನೇಕ ಮನೆಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ನಾಲ್ಕೈದು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಅವಶೇಷಗಳಡಿಯಲ್ಲಿ ಸಿಲುಕಿ ಸಮಾಧಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಘಟನೆಯ ಬಗ್ಗೆ ಇನ್ನೂ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಘಟನೆಯ ಭೀಕರತೆ ಘೋರವಾಗಿದೆ.