ಬೆಂಗಳೂರು, ಆ.6-ರಾಜ್ಯದಲ್ಲಿ ನೈಋತ್ಯ ಮುಂಗಾರು ಚೇತರಿಕೆಯಾಗಿದ್ದು, ರಾಜ್ಯದಲ್ಲಿ ಉತ್ತಮ ಹಾಗೂ ವ್ಯಾಪಕ ಮಳೆಯಾಗುತ್ತಿದೆ. ಕಳೆದ ವಾರ ದುರ್ಬಲಗೊಂಡಿದ್ದ ಮುಂಗಾರು ಈ ವಾರ ಚುರುಕಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ರಾಜ್ಯದಲ್ಲಿ ಒಳ್ಳೆಯ ಮಳೆಯಾಗುತ್ತಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಒಳ್ಳೆಯ ಮಳೆಯಾಗುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಹಲವೆಡೆ ಹಗುರದಿಂದ ಸಾಧಾರಣ ಮಳೆಯಾದರೆ, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಳ್ತಂಗಡಿ ತಾಲ್ಲೂಕಿನ ಅರಸಿನ ಮಕ್ಕಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 213 ಮಿ.ಮೀ.ನಷ್ಟು ಗರಿಷ್ಠ ಪ್ರಮಾಣದ ಮಳೆಯಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಗದಗ, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ಚಿಕ್ಕಮಗಳೂರು, ಧಾರವಾಡ, ಬೆಳಗಾವಿ, ಕೊಪ್ಪಳ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಹಾಸನ, ರಾಯಚೂರು, ಕಲಬುರಗಿ, ಶಿವಮೊಗ್ಗ, ಕೊಡಗು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆ ಬಿದ್ದಿದೆ.
ಬೆಂಗಳೂರು ನಗರ, ಕೋಲಾರ, ಚಾಮರಾಜನಗರ, ತುಮಕೂರು, ಬೀದರ್, ಚಿಕ್ಕಬಳ್ಳಾಪುರ, ಯಾದಗಿರಿ, ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ ಸಾಧಾರಣ ವ್ಯಾಪಕ ಮಳೆಯಾಗಿದೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆ ಬಿದ್ದಿದೆ. ಒಟ್ಟಾರೆ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದ ಮಳೆಯಾಗಿದೆ. ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಬಿತ್ತನೆ ಕಾರ್ಯದಲ್ಲಿ ರೈತರು ತೊಡಗಿಕೊಂಡಿದ್ದಾರೆ.
- 80ರ ವೃದ್ಧನಿಗೆ ಪ್ರೀತಿ ಹೆಸರಲ್ಲಿ ನಾಲ್ವರು ಮಹಿಳೆಯರಿಂದ 9 ಕೋಟಿ ವಂಚನೆ
- ಸವಿತಕ್ಕ ಪುತ್ರನ ಆತಹತ್ಯೆಗೆ “ಡೆತ್ನೋಟ್” ವೆಬ್ಸೀರಿಸ್ ಕಾರಣವಂತೆ..?
- ಎಲ್ಲಾ ರಾಜ್ಯಗಳಲ್ಲೂ ಅನರ್ಹ ಮತದಾರರಿಗೆ ಕೋಕ್
- ಆನ್ಲೈನ್ ಗೇಮ್ಗಾಗಿ ಹಣಕ್ಕೆ ಪೀಡಿಸುತ್ತಿದ್ದ ತಂಗಿ ಮಗನನ್ನೇ ಕೊಂದ ಮಾವ
- ಮತಗಳ್ಳತನದ ವಿರುದ್ಧ ಬೆಂಗಳೂರಲ್ಲಿ ರಾಹುಲ್ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ