ಬೆಂಗಳೂರು, ಆ.6- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿದ್ದಲ್ಲದೇ, ಆಸ್ಪತ್ರೆಗಳ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಸರ್ಕಾರಿ ಕಚೇರಿಗಳಿಗೂ ಸಿದ್ದರಾಮಯ್ಯ ಭೇಟಿ ನೀಡಿದ್ದರು.
ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಪ್ರವಾಸವನ್ನು ಹವಾಮಾನ ವೈಪರೀತ್ಯದ ಕಾರಣಕ್ಕಾಗಿ ರದ್ದು ಪಡಿಸಿದ ಸಿದ್ದರಾಮಯ್ಯ ಅವರು, ತಮೆಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಿಕೊಂಡಿದ್ದರು. ಆದರೆ ಇದ್ದಕ್ಕಿಂದ್ದಂತೆ ಮಧ್ಯಾಹ್ನದ ವೇಳೆಗೆ ಅನಿರೀಕ್ಷಿತವಾಗಿ ತಮ ಕಾರ್ಯಕ್ರಮಗಳನ್ನು ಬದಲಿಸಿಕೊಂಡು ದಿಢೀರೆಂದು ಕೆಆರ್ ಮಾರುಕಟ್ಟೆ ರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರು.
ಈ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಶರಣಪ್ರಕಾಶ್ ಪಾಟೀಲ್ ಉಪಸ್ಥಿತರಿದ್ದರು. ಆಸ್ಪತ್ರೆಗೆ ಭೇಟಿ ಮಾಡಿದ ಮುಖ್ಯಮಂತ್ರಿಯವರು, ರೋಗಿಗಳು ಹಾಗೂ ಅವರ ಸಂಬಂಧಿಕರ ಜೊತೆ ಸಮಾಲೋಚನೆ ನಡೆಸಿದ್ದರು. ಈ ವೇಳೆ ಚಂದ್ರಾ ಲೇಔಟ್‌ನಿಂದ ಬಂದಿದ್ದ ಮಹಿಳೆಯೊಬ್ಬರು ದುಃಖಿತರಾಗಿ ತಮಗಾಗುತ್ತಿರುವ ತೊಂದರೆಯನ್ನು ಹೇಳಿಕೊಂಡಿದ್ದಲ್ಲದೆ, ಸಹಾಯ ಮಾಡುವಂತೆ ಮೊರೆಯಿಟ್ಟರು.
ಈ ವೇಳೆ ಸಿದ್ದರಾಮಯ್ಯ ಅವರ ಸರ್ಕಾರವನ್ನು ಮಹಿಳೆ ಹೊಗಳಿದ್ದು ವಿಶೇಷವಾಗಿತ್ತು. ಆಸ್ಪತ್ರೆಗೆ ತೆರಳಿದ ವೇಳೆ ಕೆಲ ಅವ್ಯವಸ್ಥೆಗಳನ್ನು ಗಮನಿಸಿದ ಮುಖ್ಯಮಂತ್ರಿಯವರು ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆಸ್ಪತ್ರೆಗಳಿಗೆ ಅಗತ್ಯವಿರುವ ಸಲಕರಣೆಗಳು ಮತ್ತು ಅದಕ್ಕೆ ಪೂರ್ವಕವಾದ ಸಿಬ್ಬಂದಿಗಳ ನೇಮಕಾತಿಯ ಬಗ್ಗೆಯೂ ಚರ್ಚೆ ನಡೆಸಿದ್ದರು.
ಮುಖ್ಯಮಂತ್ರಿ ಅವರ ಈ ಅನಿರೀಕ್ಷಿತ ಭೇಟಿಗೆ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ವೈದ್ಯರು ತಬ್ಬಿಬ್ಬಾದರು. ಸಾಮಾನ್ಯವಾಗಿ ಕಾರ್ಯಕ್ರಮಗಳು ರದ್ದಾದರೆ, ಸಿದ್ದರಾಮಯ್ಯ ತಮ ಗೃಹಕಚೇರಿ ಕಾವೇರಿಯಲ್ಲಿ ಅಧಿಕಾರಿಗಳ ಜೊತೆ ಕಡತಗಳ ಪರಿಶೀಲನೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಆದರೆ ಇದೇ ಮೊದಲ ಬಾರಿಗೆ ಆಸ್ಪತ್ರೆಗೆ ಭೇಟಿ ನೀಡಿ ಜನಸಾಮಾನ್ಯರ ಸಮಸ್ಯೆ ಆಲಿಸಿದ್ದು, ವಿಶೇಷವಾಗಿತ್ತು.
ಸಂಪುಟದ ಬಹುತೇಕ ಸಚಿವರಿಗೆ ತಮ ಜಿಲ್ಲೆಗಳಲ್ಲಿನ ಆಸ್ಪತ್ರೆಗಳು ಹಾಗೂ ಹಾಸ್ಟೆಲ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡುವಂತೆ ಮುಖ್ಯಮಂತ್ರಿ ಹಲವು ಬಾರಿ ಸೂಚನೆ ನೀಡಿದ್ದಾರೆ. ಆದರೆ ಈ ವರೆಗೂ ಯಾವ ಸಚಿವರೂ ಈ ರೀತಿ ಅನಿರೀಕ್ಷಿತ ಭೇಟಿ ನೀಡಿಲ್ಲ ಉದಾಹರಣೆಗಳಿಲ್ಲ. ಇತ್ತೀಚೆಗೆ ಲೋಕಾಯುಕ್ತರು, ಉಪಲೋಕಾಯುಕ್ತರೇ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ಮುಖ್ಯಮಂತ್ರಿಯವರು ಕೆಲವು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು.
- ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ವಾಯುಪ್ರದೇಶ ನಿಷೇಧಿಸಿ ಭಾರಿ ನಷ್ಟ ಅನುಭವಿಸಿದ ಪಾಕ್
- ಮಂಗಳವಾರ ಪಾಕ್ ಮಾಜಿ ಪ್ರಧಾನಿ ಇಮ್ರಾನ್ಖಾನ್ ಜಾಮೀನು ಅರ್ಜಿ ವಿಚಾರಣೆ
- ಅಂತರರಾಷ್ಟ್ರೀಯ ಐಎಂಇಸಿ ಯೋಜನೆಯಲ್ಲಿ ಭಾರತದ ಪಾತ್ರ ನಿರ್ಣಾಯಕ ; ಇಟಲಿ
- ಉತ್ತರಪ್ರದೇಶ : ಟ್ರಾನ್ಸ್ಜೆಂಡರ್ ಮಹಿಳೆ ಮತ್ತು ಸಹೋದರನ ಬರ್ಬರ ಕೊಲೆ
- ಮತಗಳ್ಳತನದ ವೆಬ್ಪೇಜ್ ಆರಂಭಿಸಿದ ಕಾಂಗ್ರೆಸ್