Saturday, August 9, 2025
Homeಜಿಲ್ಲಾ ಸುದ್ದಿಗಳು | District Newsಚಿಕ್ಕಬಳ್ಳಾಪುರ | Chikkaballapurಜಿಲ್ಲಾ ಪಂಚಾಯ್ತಿ ಆವರಣದಲ್ಲೇ ಆತ್ಮಹತ್ಯೆಗೆ ಶರಣಾದ ಕಾರು ಚಾಲಕ

ಜಿಲ್ಲಾ ಪಂಚಾಯ್ತಿ ಆವರಣದಲ್ಲೇ ಆತ್ಮಹತ್ಯೆಗೆ ಶರಣಾದ ಕಾರು ಚಾಲಕ

Car driver commits suicide in Zilla Panchayat premise

ಚಿಕ್ಕಬಳ್ಳಾಪುರ,ಆ.7- ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯ ಕಾರು ಚಾಲಕ(ಖಾಸಗಿಚಾಲಕ) ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಜಿಪಂ ಕಚೇರಿ ಆವರಣದಲ್ಲಿ ನಡೆದಿದೆ.

ಬಾಪೂಜಿನಗರದ ನಿವಾಸಿ ಬಾಬು(33) ಆತಹತ್ಯೆ ಮಾಡಿಕೊಂಡ ಕಾರು ಚಾಲಕ. ಕಳೆದ 8 ವರ್ಷಗಳಿಂದ ಖಾಸಗಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದು, ಚಿಕ್ಕಬಳ್ಳಾಪುರದಲ್ಲೇ ಸ್ವಂತ ಮನೆ ಮಾಡಿಕೊಂಡು ಹೆಂಡತಿಯೊಂದಿಗೆ ವಾಸವಾಗಿದ್ದ.

ರಾತ್ರಿ ಮನೆಯಿಂದ ಹೊರಹೋದ ಬಾಬು ಜಿಲ್ಲಾ ಪಂಚಾಯ್ತಿ ಕಚೇರಿ ಆವರಣದಲ್ಲಿರುವ ಹೊಂಗೆಮರಕ್ಕೆ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಗ್ಗೆ ಕೆಲಸಕ್ಕೆ ಬಂದ ನೌಕರರು ಶವವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವ ಕಾರಣಕ್ಕಾಗಿ ಆತಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತನಿಖೆಯಿಂದಷ್ಟೇ ತಿಳಿದುಬರಲಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News