Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-02-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-02-2026)

ನಿತ್ಯ ನೀತಿ : ಶಕ್ತಿಯ ಮೂಲ ಇರುವುದು ಮನಸ್ಸಿನಲ್ಲಿ. ಮಾನಸಿಕವಾಗಿ ಸಿದ್ಧತೆಗೊಂಡು ಗಟ್ಟಿ ಮನಸ್ಸಿನಿಂದ ಮಾಡಿದರೆ ಎಂಥ ಕೆಲಸವೂ ಸುಗಮವೇ..!

ಪಂಚಾಂಗ : ಭಾನುವಾರ 15-02-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಕೃಷ್ಣ /ತಿಥಿ: ತ್ರಯೋದಶಿ / ನಕ್ಷತ್ರ: ಉತ್ತರಾಷಾಢ / ಯೋಗ: ವ್ಯತೀಪಾತ / ಕರಣ: ವಿಷ್ಠಿ

ಸೂರ್ಯೋದಯ : 06.44
ಸೂರ್ಯಾಸ್ತ : 6.26
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ಸ್ವಂತ ಉದ್ಯೋಗ ಮಾಡುವವರಿಗೆ ಲಾಭ ಹೆಚ್ಚುತ್ತದೆ. ಆತ್ಮಗೌರವಕ್ಕೆ ಹೆಚ್ಚು ಬೆಲೆ ಕೊಡುವಿರಿ.
ವೃಷಭ: ಸೋದರನ ಆಗಮನ ದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮ ಮೂಡಲಿದೆ.
ಮಿಥುನ: ಹಿರಿಯ ವಿದ್ವಾಂಸರಿಗೆ ಗೌರವ ಸಿಗುತ್ತದೆ. ನಿರೀಕ್ಷಿತ ಮಟ್ಟಕ್ಕಿಂತ ಆದಾಯ ಹೆಚ್ಚಿರುತ್ತದೆ.

ಕಟಕ: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.
ಸಿಂಹ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹೊಸ ವಾಹನ ಖರೀದಿಸುವಿರಿ.
ಕನ್ಯಾ: ಸೌಜನ್ಯದಿಂದ ನಡೆದು ಕೊಳ್ಳುವುದರಿಂದ ನೆರೆಹೊರೆ ಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸುವರು. ಭಜನೆಯಿಂದ ನೆಮ್ಮದಿ ಸಿಗಲಿದೆ.

ತುಲಾ: ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ಚೆನ್ನಾಗಿರುವುದು.
ವೃಶ್ಚಿಕ: ಮಕ್ಕಳಿಂದ ನೆಮ್ಮದಿ ಸಿಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಲಾಭ.
ಧನುಸ್ಸು: ಹಣಕಾಸಿನ ವ್ಯತ್ಯಾಸಗಳಾಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ.

ಮಕರ: ನಿಮ್ಮ ಮೇಲಿದ್ದ ಆಪಾದನೆಗಳು ದೂರಾಗಿ ಮೇಲ ಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.
ಕುಂಭ: ಇತರರೊಂದಿಗೆ ಸೇರಿ ಮಾಡುವ ಕೆಲಸ- ಕಾರ್ಯಗಳಲ್ಲಿ ಉತ್ತಮ ಲಾಭ ದೊರೆಯಲಿದೆ.

ಮೀನ: ದೂರ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಉತ್ತಮ.

RELATED ARTICLES

Latest News