Friday, November 7, 2025
Homeಬೆಂಗಳೂರುಹೊರ ರಾಜ್ಯದ ಆರೋಪಿ ಸೆರೆ : 15 ಲಕ್ಷ ಮೌಲ್ಯದ 14 ದ್ವಿಚಕ್ರ ವಾಹನಗಳ ಜಪ್ತಿ

ಹೊರ ರಾಜ್ಯದ ಆರೋಪಿ ಸೆರೆ : 15 ಲಕ್ಷ ಮೌಲ್ಯದ 14 ದ್ವಿಚಕ್ರ ವಾಹನಗಳ ಜಪ್ತಿ

ಬೆಂಗಳೂರು,ನ.7-ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಹೊರ ರಾಜ್ಯದ ಆರೋಪಿಯೊಬ್ಬನನ್ನು ಬಂಧಿಸಿ, 15 ಲಕ್ಷ ವೌಲ್ಯದ ವಿವಿಧ ಮಾದರಿಯ 14 ದ್ವಿಚಕ್ರ ವಾಹನಗಳನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋವಿಂದಶೆಟ್ಟಿ ಪಾಳ್ಯದ ನಿವಾಸಿಯೊಬ್ಬರು ಅ.22 ರಂದು ಮಧ್ಯಾಹ್ನ ಎಲೆಕ್ಟ್ರಾನಿಕ್ ಸಿಟಿಗೆ ಹೋಗಿದ್ದು, 2ನೇ ಹಂತದಲ್ಲಿರುವ ಹೋಟೇಲ್ ಮುಂಭಾಗ ದ್ವಿಚಕ್ರ ವಾಹನ ನಿಲ್ಲಿಸಿ ಸಂಬಂಽಕರ ಮನೆಗೆ ಹೋಗಿದ್ದಾರೆ.

ಮಧ್ಯರಾತ್ರಿ ವಾಪಸ್ ಹೋಗಲು ಈ ಸ್ಥಳಕ್ಕೆ ಬಂದು ನೋಡಿದಾಗ ದ್ವಿಚಕ್ರ ವಾಹನ ಇರಲಿಲ್ಲ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿಗಳನ್ನು ಕಲೆಹಾಕಿ ಹುಸ್ಕೂರು ಹಣ್ಣಿನ ಮಾರ್ಕೆಟ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದ್ವಿಚಕ್ರ ವಾಹನ ಕಳವು ಮಾಡಿರುವುದಾಗಿ ಹೇಳಿದ್ದಾನೆ.

ಆರೋಪಿಯನ್ನು ಠಾಣೆಗೆ ಕರೆದು ಸುದೀರ್ಘ ವಿಚಾರಣೆ ನಡೆಸಿದಾಗ ಬೆಂಗಳೂರು ನಗರ ಹಾಗೂ ಬೆಂ ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಕಳವು ಮಾಡಿದ್ದು, ಹುಸ್ಕೂರು ಹಣ್ಣಿನ ಮಾರ್ಕೆಟ್ ಹಿಂಭಾಗದ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ಹೇಳಿದ್ದಾನೆ. ಕಾರ್ಯಾಚರಣೆ ಮುಂದುವರೆಸಿದ ಪೊಲೀಸರು ಖಾಲಿ ಜಾಗದಲ್ಲಿದ್ದ 7 ದ್ವಿಚಕ್ರ ವಾಹನಗಳು ಹಾಗೂ ರಾಯಸಂದ್ರದ ಗುಂಡು ತೋಪಿನಲ್ಲಿ ನಿಲ್ಲಿಸಿದ್ದ 6 ದ್ವಿಚಕ್ರ ವಾಹನಗಳು ಸೇರಿ ಒಟ್ಟು 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು ಅವುಗಳ ಒಟ್ಟು ವೌಲ್ಯ 15 ಲಕ್ಷ ವೌಲ್ಯ ಎಂದು ಅಂದಾಜಿಸಲಾಗಿದೆ.

ಆರೋಪಿಯ ಬಂಧನದಿಂದ ಪರಪ್ಪನ ಅಗ್ರಹಾರ ಠಾಣೆಯ 1,ಹೆಬ್ಬಗೋಡಿ 5,ಅತ್ತಿಬೆಲೆ 2 ಪ್ರಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಕಾರ್ಯಾಚರಣೆಯನ್ನು ಇನ್‌್ಸಪೆಕ್ಟರ್ ಸತೀಶ್ ಹಾಗೂ ಸಿಬ್ಬಂದಿ ತಂಡ ಕೈಗೊಂಡು ಆರೋಪಿಯನ್ನು ಬಂಽಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

RELATED ARTICLES

Latest News