ನವದೆಹಲಿ, ನ.8- ಟೀಮ್ ಇಂಡಿಯಾದ ವೇಗದ ಬೌಲರ್ ಮಹಮದ್ ಶಮಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟೀಸ್ ಜಾರಿ ಮಾಡಿದೆ. ಶಮಿ ಅವರ ಪತ್ನಿ ಹಸೀನ್ ಜಹಾನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನೋಟೀಸ್ ನೀಡಿದೆ. ನನಗೆ ಮತ್ತು ನನ್ನ ಮಗಳಿಗೆ ಕೋಲ್ಕತ್ತಾ ಹೈಕೋರ್ಟ್ ಮಂಜೂರು ಮಾಡಿರುವ ಜೀವನಾಂಶ ಹೆಚ್ಚಿಸುವಂತೆ ಕೋರಿ ಜಹಾನ್ ಅವರು, ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ತಿಂಗಳಿಗೆ 1.5 ಲಕ್ಷ ರೂ. ಮತ್ತು ಮಗಳ ಆರೈಕೆಗೆ 2.5 ಲಕ್ಷ ರೂ. ಗಳನ್ನು ನೀಡಿತ್ತು. ಈ ಹಣ ಸಾಕಾಗುವುದಿಲ್ಲ. ಹೆಚ್ಚಿನ ಹಣ ಕೊಡಿಸಬೇಕೆಂದು ಸುಪ್ರೀಂಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹಾಗೂ ಶಮಿ ಇಬ್ಬರಿಗೂ ನೋಟೀಸ್ ನೀಡಿದೆ. ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯ, ವರದಕ್ಷಿಣಿ ಕಿರುಕುಳ ಆರೋಪ ಮಾಡಿರುವ ಜಹಾನ್, ಜೀವನಾಂಶಕ್ಕಾಗಿ ದೀರ್ಘ ಕಾಲದ ಹೋರಾಟ ನಡೆಸುತ್ತಿದ್ದಾರೆ.
