Friday, November 22, 2024
Homeಬೆಂಗಳೂರುಪಶ್ಚಿಮ ವಿಭಾಗ ಪೊಲೀಸರ ಕಾರ್ಯಾಚರಣೆ: 1.15 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದು ಜಪ್ತಿ

ಪಶ್ಚಿಮ ವಿಭಾಗ ಪೊಲೀಸರ ಕಾರ್ಯಾಚರಣೆ: 1.15 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದು ಜಪ್ತಿ

ಬೆಂಗಳೂರು, ನ.21- ಪಶ್ಚಿಮ ವಿಭಾಗದ ವಿಜಯನಗರದ ಉಪವಿಭಾಗದ ಪೊಲೀಸರು 13 ಪ್ರಕರಣಗಳನ್ನು ಭೇದಿಸಿ ನಗದೂ ಸೇರಿದಂತೆ 1.15 ಕೋಟಿ ರೂ. ಮೌಲ್ಯದ ಚಿನ್ನಾಭರಣ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಿಂದ ಒಟ್ಟಾರೆ 1,11,88,900 ರೂ. ಮೌಲ್ಯದ ಒಂದು ಕೆಜಿ 993 ಗ್ರಾಂ. ಚಿನ್ನಾಭರಣಗಳು 2.45 ಲಕ್ಷ ರೂ. ಮೌಲ್ಯದ 3 ಕೆಜಿ 500 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ 1.14 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಎಸ್ಕೇಪ್ ಕಾರ್ತಿಕ್ ಸೇರಿ ಮೂವರ ಬಂಧನ:
ಗೋವಿಂದರಾಜನಗರ ಪೊಲೀಸ್ ಠಾಣೆಯ ಸ್ವತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ(33), ದಿಲೀಪ್(24) ಮತ್ತು ಅರ್ಜುನ್(23) ನನ್ನು ಬಂಧಿಸಿ 70 ಲಕ್ಷ ರೂ. ಮೌಲ್ಯದ 1 ಕೆಜಿ 215 ಗ್ರಾಂ ತೂಕದ ಚಿನ್ನಾಭರಣ ಮತ್ತು 3 ಕೆಜಿ 500 ಗ್ರಾಂ ತೂಕದ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನದಿಂದ 14 ಪ್ರಕರಣಗಳು ಬೆಳಕಿಗೆ ಬಂದಿವೆ.

ಆರೋಪಿಗಳು ಹಲವು ತಿಂಗಳುಗಳಿಂದ ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ, ಮಾಗಡಿರಸ್ತೆ, ಅನ್ನಪೂರ್ಣೇಶ್ವರ ನಗರ, ಕೊತ್ತನೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕನ್ನಕಳವು ಮಾಡಿರುವುದು ವಿಚಾರಣೆಯಿಂದ ತಿಳಿದು ಬಂದಿದೆ.

ಆರೋಪಿ ಎಸ್ಕೇಪ್ ಕಾರ್ತಿಕ್ ಹಳೇ ಆರೋಪಿಯಾಗಿದ್ದು ಈತ 2005ರಿಂದ ಇಲ್ಲಿಯವರೆಗೆ ಬೆಂಗಳೂರು ನಗರ, ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ ಹಾಗೂ ತಮಿಳುನಾಡು ರಾಜ್ಯ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 80ಕ್ಕೂ ಹೆಚ್ಚು ಕನ್ನಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.

ಗೋವಿಂದರಾಜನಗರ ಪೊಲೀಸ್ ಠಾಣೆಯ ಮತ್ತೊಂದು ಸ್ವತ್ತು ಕಳವು ಪ್ರಕರಣದ ಪೈಕಿ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು, 7.65 ಲಕ್ಷ ರೂ. ಮೌಲ್ಯದ 107 ಗ್ರಾಂ ಚಿನ್ನಾಭರಣಗಳು ಹಾಗೂ 1.14 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಸ್ವತ್ತು ಕಳವು ಪ್ರಕರಣದ ಪೈಕಿ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ 20.60 ಲಕ್ಷ ರೂ. ಮೌಲ್ಯದ 374.7 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜೆಡಿಎಸ್ ನಾಯಕರ ತೇಜೋವಧೆ ನಿಲ್ಲಿಸದಿದ್ದರೆ ಉಗ್ರ ಹೋರಾಟ..

ಇದೇ ಠಾಣೆಯ ಸ್ವತ್ತು ಕಳವು ಪ್ರಕರಣದ ಪೈಕಿ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ಆತ ನೀಡಿದ ಮಾಹಿತಿ ಮೇರೆಗೆ 11.96 ಲಕ್ಷ ರೂ. ಮೌಲ್ಯದ 199.4 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.
ಬಸವೇಶ್ವರ ನಗರ ಪೊಲೀಸ್ ಠಾಣೆಯ ಸ್ವತ್ತು ಕಳವು ಪ್ರಕರಣದ ಪೈಕಿ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ಆತ ನೀಡಿದ ಮಾಹಿತಿ ಮೇರೆಗೆ 4. 85 ಲಕ್ಷ ರೂ. ಮೌಲ್ಯದ 97 ಗ್ರಾಂ ತೂಕದ ಚಿನ್ನಾಭರಣಗಳನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.

ಪಶ್ಚಿಮ ವಿಭಾಗದ ಉಪಪೊಲೀಸ್ ಆಯುಕ್ತ ಗಿರೀಶ್ ಅವರ ನೇತೃತ್ವದಲ್ಲಿ ವಿಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಚಂದನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಇನ್ಸ್‍ಪೆಕ್ಟರ್ ನಾಗೇಶ್, ಗೋವಿಂದರಾಜನಗರ ಠಾಣೆ ಇನ್ಸ್‍ಪೆಕ್ಟರ್ ಸುಬ್ರಮಣಿ ಮತ್ತು ಬಸವೇಶ್ವರ ನಗರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಚಿಕ್ಕಸ್ವಾಮಿ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ಕೈಗೊಂಡಿದ್ದರು.

RELATED ARTICLES

Latest News