Monday, August 11, 2025
Homeಇದೀಗ ಬಂದ ಸುದ್ದಿವಿಜ್ಞಾನಿ ಕಸ್ತೂರಿರಂಗನ್‌ ಅವರಿಗೆ 'ಭಾರತ ರತ್ನ' ನೀಡಲು ಕೇಂದ್ರಕ್ಕೆ ಒತ್ತಾಯ

ವಿಜ್ಞಾನಿ ಕಸ್ತೂರಿರಂಗನ್‌ ಅವರಿಗೆ ‘ಭಾರತ ರತ್ನ’ ನೀಡಲು ಕೇಂದ್ರಕ್ಕೆ ಒತ್ತಾಯ

Bharat Ratna

ಬೆಂಗಳೂರು, ಆ.11- ಖ್ಯಾತ ವಿಜ್ಞಾನಿ ಡಾ.ಕೆ.ಕಸ್ತೂರಿರಂಗನ್‌ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಕಾನೂನು ಸಚಿವ ಹೆಚ್‌.ಕೆ.ಪಾಟೀಲ್‌ ಅವರು ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮಂಡಿಸಿದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಅವರು, ಕಸ್ತೂರಿ ರಂಗನ್‌ ಅವರಿಗೆ ಎಲ್ಲಾ ಪ್ರಶಸ್ತಿಗಳು ದೊರೆತಿವೆ. ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕು ಎಂದರು.

ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ಕಸ್ತೂರಿ ರಂಗನ್‌ ಅವರ ಹೆಸರನ್ನು ವಿಶ್ವವಿದ್ಯಾನಿಲಯಕ್ಕೆ ನಾಮಕರಣ ಮಾಡುವ ಮೂಲಕ ಗೌರವ ಸಲ್ಲಿಸಬೇಕು ಎಂಬ ಸಲಹೆ ಮಾಡಿದರು.

ವಿದ್ಯಾರ್ಥಿಗಳು ಕಸ್ತೂರಿ ರಂಗನ್‌ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಸರಿಸುತ್ತಾರೆ ಎಂದ ಅವರು, ಖ್ಯಾತ ನಟಿ ಬಿ.ಸರೋಜಾದೇವಿ ಅವರ ಹೆಸರನ್ನು ಮಲ್ಲೇಶ್ವಲರಂ 11 ಮುಖ್ಯಾರಸ್ತೆಯ, 11 ಅಡ್ಡರಸ್ತೆಗೆ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾತನಾಡಿ, ಡೆರ್ರಿಕ್‌ ಎಂ.ಬಿ.ಲಿನ್ಪಾ ಅವರು ಆಂಗ್ಲೋ ಇಂಡಿಯನ್‌ ನಾಮ ನಿರ್ದೇಶಿತ ಸದಸ್ಯರಾಗಿದ್ದರು. ಕೇಂದ್ರ ಸರ್ಕಾರವು ರಾಜ್ಯಸಭೆ, ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಈ ನಾಮನಿರ್ದೇಶನ ಮಾಡುವುದನ್ನು ತೆಗೆದಿದೆ. ಇದ್ದಿದ್ದರೆ, ಆ ಸಮುದಾಯಕ್ಕೆ ಅನುಕೂಲವಾಗುತ್ತಿತ್ತು ಎಂದು ಹೇಳಿದರು.

ಬಿಜೆಪಿ ಹಿರಿಯ ಶಾಸಕ ಆರಗಜ್ಞಾನೇಂದ್ರ ಮಾತನಾಡಿ, ಮಲೆನಾಡಿನ ಭಾಗದಲ್ಲಿ ಬೋರ್ವೆಲ್‌ ಕೊರಸಿ ನೀರು ಕೊಟ್ಟವರಯ ಬೇಗಾನೆ ರಾಮಯ್ಯ ಎಂದು ಸರಿಸಿದರು. ಪೆಹಲ್ಗಾಂ ದುರಂತ ಅತ್ಯಂತ ಅಮಾನುಷ ಕೃತ್ಯ. ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತದ ದುರಂತ ಹಾಗೂ ಏರ್‌ ಇಂಡಿಯಾದ ದುರಂತ ಸೇರಿದಂತೆ ಅಗಲಿದ ಗಣ್ಯರಿಗೆ ಶ್ರದ್ದಾಂಜಲಿ ಸಲ್ಲಿಸಿದರು.

ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು, ಬಿಜೆಪಿ ಶಾಸಕರಾದ ಸುರೇಶ್‌ಬಾಬು, ಬಿ.ವೈ.ವಿಜಯೇಂದ್ರ ಅವರು ಇತ್ತೀಚೆಗೆ ಅಗಲಿದ ಗಣ್ಯರ ಗುಣಗಾನ ಮಾಡಿ, ಪೆಹಲ್ಗಾಂ ದುರಂತ, ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತದ ದುರಂತ, ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದರು.

RELATED ARTICLES

Latest News