ಬೆಂಗಳೂರು,ಆ.11– ಶಾಲೆಗಳ ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದಲೇ ಸ್ವಚ್ಛಗೊಳಿಸುತ್ತಿರುವ ಕುರಿತು ವಿಧಾನಪರಿಷತ್‌ನಲ್ಲಿ ಗಂಭೀರ ಚರ್ಚೆಗೆ ಎಡೆಮಾಡಿಕೊಟ್ಟಿತು.ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ರಾಮೋಜಿ ರಾವ್ ಹಾಗೂ ಮಧುಮಾದೇಗೌಡ ಮತ್ತಿರರು ಇದರ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರಶ್ನೆ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಮಧುಬಂಗಾರಪ್ಪ ಅವರು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಬಾರದೆಂದು ಶಿಕ್ಷಕರಿಗೆ ಸ್ಪಷ್ಟವಾದ ನಿರ್ದೇಶನ ನೀಡಲಾಗಿದೆ. ಆದರೂ ಕೆಲವು ಕಡೆ ಇಂತಹ ಪ್ರಕರಣಗಳು ಮರುಕಳಿಸುತ್ತವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ಇದಕ್ಕಾಗಿಯೇ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ವತಿಯಿಂದ ಶಾಲೆಗಳಿಗೆ ನಿಗದಿಪಡಿಸಿದ ಒಟ್ಟು ಶೇ.10 ರಷ್ಟು ಅನುದಾನವನ್ನು ಶೌಚಾಲಯ ಸ್ವಚ್ಛತೆ ಮಾಡುವ ಸಿಬ್ಬಂದಿಗೆ ನೀಡುವಂತೆ ಸೂಚಿಸಲಾಗಿದೆ ಎಂದರು.
ಶಾಲೆಗಳಿಗೆ ಶೌಚಾಲಯ ಸ್ವಚ್ಛಗೊಳಿಸಲು ಪ್ರತ್ಯೇಕವಾಗಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಅವಕಾಶವಿಲ್ಲ. ಇದಕ್ಕೆ ಹಣಕಾಸು ಇಲಾಖೆಯು ಅನುಮತಿಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಆಗ ಸದಸ್ಯರು ಅನೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಾಲಯಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಇದರ ಬಗ್ಗೆ ಶಿಕ್ಷಕರಿಗೆ ಸ್ಪಷ್ಟವಾದ ನಿರ್ದೇಶನ ನೀಡಬೇಕು ಎಂದು ಸಲಹೆ ಮಾಡಿದರು.
- ಕೆ.ಎನ್.ರಾಜಣ್ಣ ತಲೆದಂಡ : ಸಚಿವ ಸ್ಥಾನದ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು
- ಸಚಿವ ಶಿವರಾಜ್ ತಂಗಡಗಿ ವಿರುದ್ಧ ಸ್ಪೀಕರ್ ಖಾದರ್ ಗರಂ
- ಸ್ಮಾರ್ಟ್ ಮೀಟರ್ ಅವ್ಯವಹಾರ : ಮೇಲ್ಮನೆಯಲ್ಲಿ ಗದ್ದಲ-ಕೋಲಾಹಲ
- ಗೋ ಹತ್ಯೆಗೈದು ವಿಕೃತಿ ಮೆರೆದ ಕಿಡಿಗೇಡಿಗಳು
- ಧರ್ಮಸ್ಥಳ ಎಸ್ಐಟಿ ತನಿಖೆ ಲೆಪ್ಟಿಸ್ಟ್ ಗಳ ವ್ಯವಸ್ಥಿತ ಷಡ್ಯಂತ್ರ : ಪ್ರಹ್ಲಾದ ಜೋಶಿ