Homeರಾಜ್ಯಔಷಧಿ ಪೂರೈಕೆಯಲ್ಲಿ ಸರ್ಕಾರ ವಿಫಲ : ಅಶೋಕ್‌ ಆಕ್ರೋಶ

ಔಷಧಿ ಪೂರೈಕೆಯಲ್ಲಿ ಸರ್ಕಾರ ವಿಫಲ : ಅಶೋಕ್‌ ಆಕ್ರೋಶ

Government fails to supply medicines: Ashok outraged

ಬೆಂಗಳೂರು, ಫೆ.15-ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರು ತಾವು ಕೈಗೊಳ್ಳಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್‌‍ ಸರ್ಕಾರ ಔಷಧಿ ಪೂರೈಕೆಯಲ್ಲಿ ವಿಫಲವಾಗಿರುವ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ.

ಈ ಸಂಬಂಧ ತಮ ಎಕ್‌್ಸ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು,
ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧಿ ಸಿಗುತ್ತಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡಿದರೆ, ಎಲ್ಲವೂ ಸರಿ ಇದೆ ಎಂದು ತಿಪ್ಪೆ ಸಾರಿಸುವ ಮಾತಾಡುತ್ತೀರಿ. ಮಾಧ್ಯಮಗಳು ವರದಿ ಮಾಡಿದರೂ ಕ್ಯಾರೆ ಎನ್ನುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದಿನನಿತ್ಯ ರೋಗಿಗಳಿಗೆ ಆರೋಗ್ಯ ಸೇವೆ ನೀಡುವ, ಆಸ್ಪತ್ರೆಗಳ ನಿರ್ವಹಣೆ ಮಾಡುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಮತ್ತು ನೌಕರರು ಸ್ವತಃ ತಾವೇ ಲಿಖಿತ ರೂಪದಲ್ಲಿ ಔಷಧಿ ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯದ ಬಗ್ಗೆ ಬಹಿರಂಗ ಮಾಡಿದ್ದಾರಲ್ಲ ಸ್ವಾಮಿ, ಈಗ ಏನು ಹೇಳುತ್ತೀರಿ? ಎಂದು ಅವರು ಪ್ರಶ್ನಿಸಿದ್ದಾರೆ.

ಇನ್ನು ನಿಮ ಆರೋಗ್ಯ ಸಚಿವರಂತೂ ಆರೋಗ್ಯ ಇಲಾಖೆಯನ್ನೇ ಸಂಪೂರ್ಣವಾಗಿ ಅನಾರೋಗ್ಯಪೀಡಿತಗೊಳಿಸಿದ್ದಾರೆ. ನಿಮ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ ಮರ್ಯಾದೆ ಇದ್ದರೆ, ಈ ಕೂಡಲೇ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

RELATED ARTICLES
spot_img

Latest News