Thursday, August 14, 2025
Homeಜಿಲ್ಲಾ ಸುದ್ದಿಗಳು | District Newsಮಂಡ್ಯ | Mandyaಮಂಡ್ಯ : ಹೃದಯಾಘಾತದಿಂದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

ಮಂಡ್ಯ : ಹೃದಯಾಘಾತದಿಂದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mandya: Engineering student dies of heart attack

ಮಂಡ್ಯ,ಆ.13-ಹೃದಯಾಘಾತದಿಂದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಕರೋಟಿ ಗ್ರಾಮದ ನವೀನ್‌ (21) ಮೃತ ಎಂಜಿನಿಯರಿಂಗ್‌ ವಿದ್ಯಾರ್ಥಿ.

ನವೀನ್‌ ಬೆಂಗಳೂರಿನ ಕಾಲೇಜುವೊಂದರಲ್ಲಿ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದು ರಜೆ ಇದ್ದ ಹಿನ್ನೆಲೆಯಲ್ಲಿ ಮನೆಗೆ ಬಂದಿದ್ದನು. ನಿನ್ನೆ ಬೆಳಗ್ಗೆ ಮನೆಯಲ್ಲಿ ಹಠಾತ್‌ ಹೃದಯಾಘಾತವಾಗಿ ನವೀನ್‌ ಕುಸಿದು ಬಿದ್ದಿದ್ದಾನೆ.

ತಕ್ಷಣ ಪೋಷಕರು ಕಿಕ್ಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ. ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗುತ್ತಿದ್ದ ಮಾರ್ಗಮಧ್ಯೆ ನವೀನ್‌ ಸಾವನ್ನಪ್ಪಿದ್ದಾನೆ.

ಕಿಕ್ಕೇರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದ್ದರೆ ನನ್ನ ಮಗ ಉಳಿಯುತ್ತಿದ್ದ, ಆಸ್ಪತ್ರೆಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡದೇ ಇರುವುದು ಮಗನ ಸಾವಿಗೆ ಕಾರಣ ಎಂದು ಪೋಷಕರು ತಮ ಆಕ್ರೋಶವನ್ನು ಹೊರಹಾಕಿದ್ದಾರೆ.ಮಗನ ಹಠಾತ್‌ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

RELATED ARTICLES

Latest News