Saturday, August 16, 2025
Homeರಾಜ್ಯವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ನಿಧನ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ನಿಧನ

Kumara Chandrashekaranatha Swamiji Passed Away

ಬೆಂಗಳೂರು,ಆ.16- ಕೆಂಗೇರಿ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗಳು (82) ಭೈರವೈಕ್ಯರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯವರು ಕಳೆದ ರಾತ್ರಿ 12.01ರಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಇಂದು ಮಧ್ಯಾಹ್ನವರೆಗೂ ಶ್ರೀಮಠದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಠದ ಆವರಣದಲ್ಲಿಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರೀಗಳ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಲಿದೆ.

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿರುವ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ ಎಂದು ಶ್ರೀಮಠದ ಆಪ್ತ ಮೂಲಗಳು ತಿಳಿಸಿವೆ. ಶ್ರೀಮಠದ ವತಿಯಿಂದ ಶಿಕ್ಷಣ, ಆಧ್ಯಾತಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಲ್ಲದೆ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗಳು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಿದ್ದರು. ಪೀಠಾಧಿಪತಿಯಾದಾಗಿನಿಂದಲೂ ಅವರು ಸಮಾಜದ ಒಳಿತಿಗಾಗಿ ಶ್ರಮಿಸಿದ್ದರು. ರೈತ ಪರ, ಅನ್ಯಾಯದ ವಿರುದ್ಧ ದನಿ ಎತ್ತಿದ್ದರು. ಒಕ್ಕಲಿಗರ ಸಮುದಾಯದ ಪರವಾದ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಶ್ರೀಗಳು ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರನ್ನು ಮಠದ ಪೀಠಾಧಿಪತಿಗಳನ್ನಾಗಿ ಮಾಡಿದ್ದರು.

ಶ್ರೀಗಳ ನಿಧನಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ , ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪ ಗೌಡ, ಮಠಾಧೀಶರು, ಸಮಾಜದ ಮುಖಂಡರು, ಸಚಿವರು, ಶಾಸಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಮಾರ್ಗದರ್ಶಕರಾಗಿ ಕೆಲಸ ಮಾಡಿದ್ದ ಗುರುಗಳಿಗೆ ದೇವರು ಸದ್ಗತಿ ನೀಡಲಿ ಹಾಗೂ ಶ್ರೀಗಳ ಅಗಲಿಕೆಯ ದುಃಖಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವೇಗೌಡರು ತಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಶ್ರೀಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರು ಭೈರವಕ್ಯರಾದ ಸುದ್ದಿ ತಿಳಿದು ಬಹಳ ದುಃಖವಾಯಿತು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಧ್ಯಾತ ಲೋಕದಲ್ಲಿ ಮಹೋನ್ನತ ಸಾಧನೆ ಮಾಡಿದ್ದ ಪರಮಪೂಜ್ಯರು ಸಮಾಜ ಸೇವೆ ಹಾಗೂ ಧಾರ್ಮಿಕ ಕೈಂಕರ್ಯದಲ್ಲಿ ಮುಂಚೂಣಿಯಲ್ಲಿದ್ದರು. ಅವರ ಆತಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಶ್ರೀ ಕಾಲಭೈರವೇಶ್ವರ ದಯಪಾಲಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಚಂದ್ರಶೇಖರನಾಥ ಸ್ವಾಮೀಜಿಯವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠವನ್ನು ಸ್ಥಾಪಿಸಿ ಸಾಮಾಜಿಕ, ಶೈಕ್ಷಣಿಕ, ಆಧ್ಯಾತಿಕ ಹಾಗೂ ಸೇವಾ ಕೈಂಕರ್ಯದ ಮೂಲಕ ಸಮಾಜಕ್ಕೆ ಅನನ್ಯ ಕೊಡುಗೆ ನೀಡಿರುವ ಶ್ರೀಗಳ ಅಗಲಿಕೆಯ ನೋವಿನಲ್ಲಿರುವ ಶ್ರೀಮಠದ ಭಕ್ತರಿಗೆ ದುಃಖ ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಹೇಳಿದ್ದಾರೆ.

ನಿರ್ಮಲಾನಂದನಾಥಸ್ವಾಮೀಜಿ ಸಂತಾಪ :
ಬೆಂಗಳೂರು, ಆ.16-ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ಭೌತಿಕವಾಗಿ ಇನ್ನಿಲ್ಲವಾದುದು ಅತ್ಯಂತ ದುಃಖದ ವಿಷಯ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥಸ್ವಾಮೀಜಿ ಅವರು ಸಂತಾಪ ಸೂಚಿಸಿದ್ದಾರೆ.

ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮುಂತಾದ ಕ್ಷೇತ್ರಗಳಲ್ಲಿ ನಿಷ್ಕಾಮ ಸೇವೆ ಸಲ್ಲಿಸುವ ಮೂಲಕ ಜನಮನದಲ್ಲಿ ನೆಲೆಯಾಗಿರುವ ಸ್ವಾಮೀಜಿರವರು ಜನಮಾನಸದಲ್ಲಿ ಭಕ್ತಿಯನ್ನು ನೆಲೆಗೊಳಿಸುವ ಕೈಂಕರ್ಯದಲ್ಲಿ ನಿರತರಾಗಿದ್ದರು. ಸಮಾಜದ ಮುನ್ನಡೆ ಹಾಗೂ ಅಭಿವೃದ್ಧಿಗಾಗಿ ಮಾರ್ಗದರ್ಶನ ಮಾಡುತ್ತಿದ್ದರು. ಸನಾತನ ಸಂಸ್ಕೃತಿ ಹಾಗೂ ಪರಂಪರೆಗಳ ರಕ್ಷಕರಾಗಿ, ಜನತೆಯ ದುಃಖ ದುಮಾನಗಳಿಗೆ ಸ್ಪಂದಿಸಿ ತಮ ಬೋಧನೆ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುತ್ತಿದ್ದರು ಎಂದು ಸ್ವಾಮೀಜಿ ಅವರು ತಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸದಾ ಸಮಾಜದ ಹಿತಚಿಂತನೆಯಲ್ಲಿಯೇ ಸಾರ್ಥಕ ಬದುಕು ನಡೆಸಿ ತಮ ಕಾಲಾನಂತರವೂ ಸಮಾಜ ಸೇವಾ ಕೈಂಕರ್ಯಗಳು ಶಾಶ್ವತವಾಗಿ ಮುಂದುವರೆಯಲೆಂದು ಹಲವು ಲೋಕೋಪಕಾರಿ ಕಾರ್ಯಗಳನ್ನು ಸಂಕಲ್ಪಿಸಿದ್ದರು. ಜನ ಸಾಮಾನ್ಯರ ಜೀವನ ಹಾಗೂ ಬದುಕನ್ನು ಧರ್ಮ ಮಾರ್ಗದಲ್ಲಿ ಸುವ್ಯವಸ್ಥಿತಗೊಳಿಸುವ ಧ್ಯೇಯದಿಂದ ಸತ್ಕಾರ್ಯಗಳ ಅನುಷ್ಠಾನದಲ್ಲಿ ತೊಡಗಿಸಿಕೊಂಡಿದ್ದರು. ನಮ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಗುರು ಪರಂಪರೆ ಮತ್ತು ಶ್ರೀ ಕ್ಷೇತ್ರಾದಿ ದೇವತೆಗಳಲ್ಲಿ ಅಪಾರ ಶ್ರದ್ಧಾಭಕ್ತಿ ಹೊಂದಿದ್ದರು ಎಂದು ಅವರು ಸರಿಸಿದ್ದಾರೆ.

ತಮ ಜೀವನದ ಪ್ರತಿ ಕ್ಷಣವನ್ನೂ ಮಾನವ ಜನಾಂಗದ ಉನ್ನತಿಗಾಗಿ ಮುಡಿಪಾಗಿಟ್ಟಿದ್ದ ಸ್ವಾಮೀಜಿರವರು, ಇನ್ನಿಲ್ಲವಾದುದರಿಂದ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಭರಿಸಲಾರದ ನಷ್ಟವುಂಟಾಗಿದೆ. ಶ್ರೀಗಳ ಅಗಲಿಕೆಯಿಂದ ದುಃಖತಪ್ತರಾಗಿರುವ ಅವರ ಶಿಷ್ಯರು ಹಾಗೂ ಭಕ್ತ ವೃಂದಕ್ಕೆ ಭಗವಂತನು ದುಃಖವನ್ನು ಸಹಿಸುವ ಶಕ್ತಿಯನ್ನು, ಪೂಜ್ಯರ ಆತಕ್ಕೆ ಚಿರಶಾಂತಿಯನ್ನು ನೀಡಲೆಂದು ಆಶಿಸುತ್ತೇವೆ ಎಂದು ಅವರು ಹೇಳಿದ್ದಾರೆ.

RELATED ARTICLES

Latest News